: ಸಂಸದ ಶಿವರಾಮಗೌಡ ಹರ್ಷ
ಕೊಪ್ಪಳ ಡಿ. ೧೮ : ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ ೩೭೧ನೇ ಕಲಂ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸರ್ವಾನುಮತದ ಅಂಗೀಕಾರ ದೊರೆತಿದ್ದಕ್ಕಾಗಿ ಕೊಪ್ಪಳ ಸಂಸದ ಶಿವರಾಮಗೌಡ ಅವರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.
ಹೈದ್ರಾಬಾದ್-ಕರ್ನಾಟಕ ಪ್ರದೇಶ ವ್ಯಾಪ್ತಿಯ ಜಿಲ್ಲೆಗಳಿಗೆ ಉದ್ಯೋಗ, ಶಿಕ್ಷಣ ಮುಂತಾದ ಕ್ಷೇತ್ರಗಳಲ್ಲಿ ವಿಶೇಷ ಸ್ಥಾನಮಾನ ದೊರಕಿಸಲು ಅವಕಾಶವಿರುವ ಸಂವಿಧಾನದ ೩೭೧ನೇ ಕಲಂಗೆ ತಿದ್ದುಪಡಿ ತರುವ ವಿಧೇಯಕಕ್ಕೆ ಲೋಕಸಭೆಯಲ್ಲಿ ಪಕ್ಷ-ಬೇಧ ಮರೆತು ಸರ್ವಾನುಮತದಿಂದ ಅಂಗೀಕಾರ ನೀಡಲಾಗಿದೆ. ಇಂತಹ ಐತಿಹಾಸಿಕ ವಿಧೇಯಕಕ್ಕೆ ಅಂಗೀಕಾರ ದೊರೆಯಲು ಶ್ರಮಿಸಿದ ಪ್ರಧಾನಮಂತ್ರಿ ಮನಮೋಹನ್‌ಸಿಂಗ್, ಮುಖಂಡರಾದ ಅಡ್ವಾಣಿ, ಸುಷ್ಮಾ ಸ್ವರಾಜ್ ಸೇರಿದಂತೆ ಎಲ್ಲ ಸಂಸದರಿಗೆ ಅಭಿನಂದನೆಗಳನ್ನು ಸಲ್ಲಿಸಿರುವ ಸಂಸದ ಶಿವರಾಮಗೌಡ ಅವರು, ಈ ಸಂವಿಧಾನದ ತಿದ್ದುಪಡಿಯ ಸದುಪಯೋಗವನ್ನು ಪಡೆದುಕೊಂಡು, ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಒಂದಾಗಿ ಶ್ರಮಿಸೋಣ ಎಂದು ಸಂಸದರು ತಿಳಿಸಿದ್ದಾರೆ.
ಶಾಸಕ ಸಂಗಣ್ಣ ಕರಡಿ ಸಂತಸ
ಕೊಪ್ಪಳ ಡಿ. ೧೮ : ಅತ್ಯಂತ ಹಿಂದುಳಿದ ಪ್ರದೇಶವಾಗಿರುವ ಹೈದ್ರಾಬಾದ್-ಕರ್ನಾಟಕ ಪ್ರದೇಶ ವ್ಯಾಪ್ತಿಯ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ ೩೭೧ನೇ ಕಲಂ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿರುವ ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಈ ಐತಿಹಾಸಿಕ ಬೆಳವಣಿಗೆಯನ್ನು ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ.
ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ ತಿದ್ದುಪಡಿಗೆ ಒತ್ತಾಯಿಸಿ, ನಡೆಸಿದ ಈ ಭಾಗದ ಎಲ್ಲ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳ ಹೋರಾಟಕ್ಕೆ ಸಂದ ಜಯ ಇದಾಗಿದೆ. ಸಂವಿಧಾನದ ತಿದ್ದುಪಡಿಗೆ ಸಹಕರಿಸಿದ, ಶ್ರಮಿಸಿದ ಕೇಂದ್ರ ಸರ್ಕಾರ ಅಭಿನಂದನಾರ್ಹವಾಗಿದೆ. ಈ ನಿಟ್ಟಿನಲ್ಲಿ ಶ್ರಮಿಸಿದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಎಲ್ಲ ಸಚಿವರುಗಳು, ಸಂಸದರು, ಶಾಸಕರುಗಳು ಎಲ್ಲರಿಗೂ ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
0 comments:
Post a Comment