ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿನ ಕೊಪ್ಪಳ ನಗರಸಭೆ, ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಮತ್ತು ಯಲಬುರ್ಗಾಗ ಪಟ್ಟಣ ಪಂಚಾಯತ್‌ಗೆ ವಾರ್ಡ್‌ವಾರು ಮೀಸಲಾತಿಯ ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಯಾವುದೇ ಆಕ್ಷೇಪಣೆಯನ್ನು ಸಲ್ಲಿಸಲು ಇಚ್ಚಿಸುವ ವ್ಯಕ್ತಿಗಳು ೭ ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
ಕರಡು ಮೀಸಲಾತಿ ಅಧಿಸೂಚನೆಗಳನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ತಹಶೀಲ್ದಾರರ ಕಾರ್ಯಾಲಯಗಳಲ್ಲಿ ಅವಲೋಕಿಸಬಹುದಾಗಿದ್ದು, ರಾಜ್ಯ ಪತ್ರದಲ್ಲಿ ಪ್ರಕಟಿಸಿದ ೭ ದಿನಗಳ ಒಳಗಾಗಿ ಸಂಬಂಧಿಸಿದ ಯಾವುದೇ ಆಕ್ಷೇಪಣೆಯನ್ನು ಸಲ್ಲಿಸಲು ಇಚ್ಚಿಸುವ ವ್ಯಕ್ತಿಗಳು ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ದಾಖಲೆಗಳೊಂದಿಗೆ ಸಾರ್ವಜನಿಕರು ನಿಗದಿತ ದಿನಾಂಕಕ್ಕೆ ಮೊದಲು ಸಲ್ಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

0 comments:
Post a Comment