PLEASE LOGIN TO KANNADANET.COM FOR REGULAR NEWS-UPDATES

ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಣೆಯನ್ನು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳ, ಸಾಂಕೇತಿಕವಾಗಿ ಆಚರಿಸಲಾಯಿತು.
     ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಗರದ ಸಾಹಿತ್ಯ ಭವನದಲ್ಲಿ ಕನಕದಾಸರ ಜಯಂತಿ ಆಚರಣೆಯನ್ನು ಸರಳವಾಗಿ ಆಚರಿಸಲಾಯಿತು.
     ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರ ನಿಧನದ ಕಾರಣ ರಾಜ್ಯದಲ್ಲಿ ಶೋಕಾಚರಣೆ ಇರುವುದರಿಂದ, ಕನಕದಾಸರ ಜಯಂತಿ ಆಚರಣೆಯನ್ನು ಕನಕದಾಸರ ಭಾವಚಿತ್ರಕ್ಕೆ ಭಕ್ತಿ ಭಾವದೊಂದಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಸರಳ ಹಾಗೂ ಸಾಂಕೇತಿವಾಗಿ ಆಚರಿಸಲಾಯಿತು.  ಶಾಸಕ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಘವೇಂದ್ರ ಹಿಟ್ನಾಳ್, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುರೇಶ್ ದೇಸಾಯಿ, ಜಿ.ಪಂ. ಸದಸ್ಯೆ ವನಿತಾ ಗಡಾದ, ಮಾಜಿ ಶಾಸಕ ಬಸವರಾಜ ಹಿಟ್ನಾಳ್ ಮುಂತಾದ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.  ಇದಕ್ಕೂ ಮುನ್ನ ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರ ನಿಧನ ನಿಮಿತ್ಯ ಎರಡು ನಿಮಿಷಗಳ ಮೌನ ಆಚರಿಸಲಾಯಿತು.


Advertisement

0 comments:

Post a Comment

 
Top