ಸಂಸದ ಶಿವರಾಮಗೌಡ
: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ನೀಡುವ ಸೌಲಭ್ಯದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಬೇಕಿದೆ ಎಂದು ಸಂಸದ ಶಿವರಾಮಗೌಡ ಅವರು ಹೇಳಿದರು.
ಯಲಬುರ್ಗಾ ತಾಲೂಕು ಕುಕನೂರಿನಲ್ಲಿ ೧. ೨೩ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ.ಕ.ರ.ಸಾ.ಸಂಸ್ಥೆಯ ನೂತನ ಬಸ್ ಘಟಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ರಾಜ್ಯದ ಸರ್ಕಾರಿ ಬಸ್‌ಗಳ ಸೇವಾ ಸೌಲಭ್ಯದ ಗುಣಮಟ್ಟ ಇಡೀ ದೇಶದಲ್ಲಿಯೇ ಅತ್ಯುತ್ತಮವಾಗಿದ್ದು, ಈಗಾಗಲೆ ಇದಕ್ಕಾಗಿ ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಗುಣಮಟ್ಟದ ಸೇವೆಗಾಗಿ ರಾಜ್ಯದ ಸಾರಿಗೆ ಸಂಸ್ಥೆಯು ಪ್ರಶಸ್ತಿಯನ್ನು ಪಡೆದಿದೆ. ಆದರೂ ಸಾರಿಗೆ ಸಂಸ್ಥೆಯಲ್ಲಿನ ಆರ್ಥಿಕ ಸೋರಿಕೆಯನ್ನು ತಡೆಗಟ್ಟಿದಲ್ಲಿ, ಸಂಸ್ಥೆಯ ಆದಾಯ ತಂತಾನೆ ಹೆಚ್ಚಾಗಲಿದ್ದು, ಇನ್ನಷ್ಟು ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಾಗಲಿದೆ. ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೆ ಸಾರಿಗೆ ಸಂಸ್ಥೆ ಪ್ರತಿಯೊಂದು ಗ್ರಾಮಗಳಿಗೂ ಬಸ್ ಸೌಲಭ್ಯವನ್ನು ಒದಗಿಸಿದ್ದು, ಆದಾಗ್ಯೂ ಕೊಪ್ಪಳ ತಾಲೂಕಿನಲ್ಲಿ ೩, ಕುಷ್ಟಗಿ-೩, ಗಂಗಾವತಿ ತಾಲೂಕಿನ ೨ ಗ್ರಾಮಗಳಿಗೆ ಇದುವರೆಗೂ ಬಸ್ ತಲುಪಿಸಲು ಸಾಧ್ಯವಾಗಿಲ್ಲ. ಆದರೆ ಯಲಬುರ್ಗಾ ತಾಲೂಕಿನಲ್ಲಿ ಎಲ್ಲಾ ಗ್ರಾಮಗಳಿಗೂ ಬಸ್‌ಗಳು ಸಂಚರಿಸುತ್ತಿವೆ. ಬಸ್ ನಿಲ್ದಾಣಗಳಲ್ಲಿನ ಶೌಚಾಲಯಗಳಲ್ಲಿ ಸ್ವಚ್ಛತೆಯ ಕೊರತೆ ಇದ್ದು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಗಮನ ಹರಿಸಿ, ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ದೊರಕಿಸಲು ಮುಂದಾಗಬೇಕು ಎಂದು ಸಂಸದ ಶಿವರಾಮಗೌಡ ಅವರು ಹೇಳಿದರು.
ವಿಧಾನಪರಿಷತ್ ಸದಸ್ಯ ಹಾಲಪ್ಪ ಆಚಾರ್ ಅವರು ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ತಲಾ ಒಂದು ಬಸ್ ಘಟಕಗಳಿದ್ದರೆ, ಯಲಬುರ್ಗಾ ತಾಲೂಕಿನಲ್ಲಿ ಮಾತ್ರ ಯಲಬುರ್ಗಾ ಮತ್ತು ಕುಕನೂರಿನಲ್ಲಿ ಹೀಗೆ ಎರಡು ಬಸ್ ಘಟಕಗಳನ್ನು ಪ್ರಾರಂಭಿಸಿರುವುದು, ಹಿಂದುಳಿದ ತಾಲೂಕಿಗೆ ಆದ್ಯತೆ ನೀಡಿದಂತಾಗಿದೆ. ಜನಪ್ರತಿನಿಧಿಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ಪಕ್ಷಬೇಧವನ್ನು ಮೀಸಲಿರಿಸಬೇಕು, ಆದರೆ ಅಭಿವೃದ್ಧಿಯ ವಿಷಯ ಬಂದಾಗ ಪಕ್ಷ ಬೇಧವನ್ನು ಬದಿಗಿರಿಸಿ, ಒಟ್ಟಾಗಿ ಅಭಿವೃದ್ಧಿಗೆ ಶ್ರಮಿಸುವಂತಹ ಮನೋಭಾವ ಬೆಳೆಸಿಕೊಳ್ಳಬೇಕು. ಅಭಿವೃದ್ಧಿಯ ವಿಷಯದಲ್ಲಿಯೂ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.

ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಶಾಸಕ ಸಂಗಣ್ಣ ಕರಡಿ, ಜಿ.ಪಂ. ಸದಸ್ಯ ಈರಪ್ಪ ಕುಡಗುಂಟಿ ಕಾರ್ಯಕ್ರಮ ಕುರಿತು ಮಾತನಾಡಿದರು. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿ.ಎನ್. ಶಿವಮೂರ್ತಿ ಪ್ರಾಸ್ತಾವಿಕ ಭಾಷಣ ಮಾಡಿ, ಈ.ಕ.ರ.ಸಾ.ಸಂಸ್ಥೆಯ ಕಾರ್ಯ ಚಟುವಟಿಕೆಗಳ ಕುರಿತು ವಿವರಿಸಿದರು. ಯಲಬುರ್ಗಾ ಶಾಸಕ ಈಶಣ್ಣ ಗುಳಗಣ್ಣವರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ತಾ.ಪಂ. ಅಧ್ಯಕ್ಷೆ ಲಕ್ಷ್ಮವ್ವ ಹಂಪಣ್ಣ ರಾಠೋಡ, ಉಪಾಧ್ಯಕ್ಷೆ ಮಹಾದೇವಿ ಕಳಕಪ್ಪ ಕಂಬಳಿ, ತಾ.ಪಂ. ಸದಸ್ಯ ಶೇಖರಪ್ಪ ಸಿದ್ದಪ್ಪ ವಾರದ, ತಾ.ಪಂ. ಸದಸ್ಯೆ ರೇಣುಕಾ ಬಸವರಾಜ ಬೆದವಟ್ಟಿ, ಗ್ರಾ.ಪಂ. ಅಧ್ಯಕ್ಷೆ ಯಲ್ಲಮ್ಮ ಹೊಳಲಪ್ಪ ಗಾಣಗೇರ, ಉಪಾಧ್ಯಕ್ಷ ಕರಬಸಯ್ಯ ಬಿನ್ನಾಳ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಪ್ರಾರಂಭದಲ್ಲಿ ಈ.ಕ.ರ.ಸಾ.ಸಂಸ್ಥೆಯ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಮಿನುಲ್ಲಾ ಸಾಹೇಬ್ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.
ಯಲಬುರ್ಗಾ ತಾಲೂಕು ಕುಕನೂರಿನಲ್ಲಿ ೧. ೨೩ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ.ಕ.ರ.ಸಾ.ಸಂಸ್ಥೆಯ ನೂತನ ಬಸ್ ಘಟಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ರಾಜ್ಯದ ಸರ್ಕಾರಿ ಬಸ್‌ಗಳ ಸೇವಾ ಸೌಲಭ್ಯದ ಗುಣಮಟ್ಟ ಇಡೀ ದೇಶದಲ್ಲಿಯೇ ಅತ್ಯುತ್ತಮವಾಗಿದ್ದು, ಈಗಾಗಲೆ ಇದಕ್ಕಾಗಿ ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಗುಣಮಟ್ಟದ ಸೇವೆಗಾಗಿ ರಾಜ್ಯದ ಸಾರಿಗೆ ಸಂಸ್ಥೆಯು ಪ್ರಶಸ್ತಿಯನ್ನು ಪಡೆದಿದೆ. ಆದರೂ ಸಾರಿಗೆ ಸಂಸ್ಥೆಯಲ್ಲಿನ ಆರ್ಥಿಕ ಸೋರಿಕೆಯನ್ನು ತಡೆಗಟ್ಟಿದಲ್ಲಿ, ಸಂಸ್ಥೆಯ ಆದಾಯ ತಂತಾನೆ ಹೆಚ್ಚಾಗಲಿದ್ದು, ಇನ್ನಷ್ಟು ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಾಗಲಿದೆ. ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೆ ಸಾರಿಗೆ ಸಂಸ್ಥೆ ಪ್ರತಿಯೊಂದು ಗ್ರಾಮಗಳಿಗೂ ಬಸ್ ಸೌಲಭ್ಯವನ್ನು ಒದಗಿಸಿದ್ದು, ಆದಾಗ್ಯೂ ಕೊಪ್ಪಳ ತಾಲೂಕಿನಲ್ಲಿ ೩, ಕುಷ್ಟಗಿ-೩, ಗಂಗಾವತಿ ತಾಲೂಕಿನ ೨ ಗ್ರಾಮಗಳಿಗೆ ಇದುವರೆಗೂ ಬಸ್ ತಲುಪಿಸಲು ಸಾಧ್ಯವಾಗಿಲ್ಲ. ಆದರೆ ಯಲಬುರ್ಗಾ ತಾಲೂಕಿನಲ್ಲಿ ಎಲ್ಲಾ ಗ್ರಾಮಗಳಿಗೂ ಬಸ್‌ಗಳು ಸಂಚರಿಸುತ್ತಿವೆ. ಬಸ್ ನಿಲ್ದಾಣಗಳಲ್ಲಿನ ಶೌಚಾಲಯಗಳಲ್ಲಿ ಸ್ವಚ್ಛತೆಯ ಕೊರತೆ ಇದ್ದು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಗಮನ ಹರಿಸಿ, ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ದೊರಕಿಸಲು ಮುಂದಾಗಬೇಕು ಎಂದು ಸಂಸದ ಶಿವರಾಮಗೌಡ ಅವರು ಹೇಳಿದರು.
ವಿಧಾನಪರಿಷತ್ ಸದಸ್ಯ ಹಾಲಪ್ಪ ಆಚಾರ್ ಅವರು ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ತಲಾ ಒಂದು ಬಸ್ ಘಟಕಗಳಿದ್ದರೆ, ಯಲಬುರ್ಗಾ ತಾಲೂಕಿನಲ್ಲಿ ಮಾತ್ರ ಯಲಬುರ್ಗಾ ಮತ್ತು ಕುಕನೂರಿನಲ್ಲಿ ಹೀಗೆ ಎರಡು ಬಸ್ ಘಟಕಗಳನ್ನು ಪ್ರಾರಂಭಿಸಿರುವುದು, ಹಿಂದುಳಿದ ತಾಲೂಕಿಗೆ ಆದ್ಯತೆ ನೀಡಿದಂತಾಗಿದೆ. ಜನಪ್ರತಿನಿಧಿಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ಪಕ್ಷಬೇಧವನ್ನು ಮೀಸಲಿರಿಸಬೇಕು, ಆದರೆ ಅಭಿವೃದ್ಧಿಯ ವಿಷಯ ಬಂದಾಗ ಪಕ್ಷ ಬೇಧವನ್ನು ಬದಿಗಿರಿಸಿ, ಒಟ್ಟಾಗಿ ಅಭಿವೃದ್ಧಿಗೆ ಶ್ರಮಿಸುವಂತಹ ಮನೋಭಾವ ಬೆಳೆಸಿಕೊಳ್ಳಬೇಕು. ಅಭಿವೃದ್ಧಿಯ ವಿಷಯದಲ್ಲಿಯೂ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.
ಪ್ರಾರಂಭದಲ್ಲಿ ಈ.ಕ.ರ.ಸಾ.ಸಂಸ್ಥೆಯ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಮಿನುಲ್ಲಾ ಸಾಹೇಬ್ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.
0 comments:
Post a Comment
Click to see the code!
To insert emoticon you must added at least one space before the code.