PLEASE LOGIN TO KANNADANET.COM FOR REGULAR NEWS-UPDATES

 ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುಕನೂರು ಬಸ್ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮ ಡಿ.೦೮ ರಂದು ಬೆಳಿಗ್ಗೆ ೧೧.೩೦ ಕ್ಕೆ ಕುಕನೂರಿನಲ್ಲಿ ಜರುಗಲಿದೆ.
ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಗೃಹ ಮತ್ತು ಸಾರಿಗೆ ಸಚಿವ ಆರ್. ಅಶೋಕ ಅವರು ನೆರವೇರಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿ ಅವರು ದೀಪ ಬೆಳಗಿಸುವರು. ಯಲಬುರ್ಗಾ ಶಾಸಕ ಈಶಣ್ಣ ಗುಳಗಣ್ಣವರ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಸಂಸದ ಶಿವರಾಮಗೌಡ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಶಿವರಾಜ ತಂಗಡಗಿ, ಪರಣ್ಣ ಮುನವಳ್ಳಿ, ಕರಡಿ ಸಂಗಣ್ಣ, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಶಶೀಲ್ ಜಿ.ನಮೋಶಿ, ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ಜಿ.ಪಂ.ಸದಸ್ಯ ಈರಪ್ಪ ಕುಡಗುಂಟಿ, ತಾ.ಪಂ.ಅಧ್ಯಕ್ಷೆ ಲಕ್ಷ್ಮವ್ವ ಹಂಪಣ್ಣ ರಾಠೋಡ, ತಾ.ಪಂ.ಉಪಾಧ್ಯಕ್ಷೆ ಮಹಾದೇವಿ ಕಳಕಪ್ಪ ಕಂಬಳಿ, ಕುಕನೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಜಯರಾಜ ದೇಸಾಯಿ, ತಾ.ಪಂ. ಸದಸ್ಯರಾದ ಶೇಖರಪ್ಪ ಸಿದ್ದಪ್ಪ ವಾರದ, ರೇಣುಕಾ ಬಸವರಾಜ ಬೆದವಟ್ಟಿ, ಕುಕನೂರು ಗ್ರಾ.ಪಂ. ಅಧ್ಯಕ್ಷೆ ಯಲ್ಲಮ್ಮ ಹೊಳಲಪ್ಪ ಗಾಣಗೇರ, ಉಪಾಧ್ಯಕ್ಷ ಕರಬಸಯ್ಯ ಅಪ್ಪಯ್ಯ ಬಿನ್ನಾಳ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್.ಮಂಜುನಾಥ ಪ್ರಸಾದ ಅವರು ಪಾಲ್ಗೊಳ್ಳುವರು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಮಿನುಲ್ಲಾ ಸಾಹೇಬ ಅವರು ತಿಳಿಸಿದ್ದಾg

Advertisement

0 comments:

Post a Comment

 
Top