PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ  : ಕಾಲೇಜು ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಇರಕಲ್ಲಗಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜ.೦೨ ರಂದು ಬೆಳಿಗ್ಗೆ ೧೦.೩೦ ಕ್ಕೆ ಇರಕಲ್ಲಗಡ ಗ್ರಾಮದ ಕಾಲೇಜ ಆವರಣದಲ್ಲಿ ನೂತನ ಕಾಲೇಜು ಕಟ್ಟಡದ ಉದ್ಘಾಟನೆ ಸಮಾರಂಭ ಜರುಗಲಿದೆ.
ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಕುದರಿಮೋತಿಯ ಮೈಸೂರುಮಠದ ಶ್ರೀ ವಿಜಯಮಹಾಂತ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸುವರು. ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಅವರು ನೆರವೇರಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿ ಅವರು ಜ್ಯೋತಿ ಬೆಳಗಿಸಲಿದ್ದಾರೆ. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಅಧ್ಯಕ್ಷತೆ ವಹಿಸುವರು. 
ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಸಂಸದ ಶಿವರಾಮಗೌಡ, ಕೊಪ್ಪಳ ಶಾಸಕ ಸಂಗಣ್ಣ ಕರಡಿ, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಶಶೀಲ್ ಜಿ.ನಮೋಶಿ, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ತಾ.ಪಂ.ಅಧ್ಯಕ್ಷ ದೇವಣ್ಣ ಭರಮಪ್ಪ ಮೆಕಾಳಿ, ಜಿ.ಪಂ.ಸದಸ್ಯೆ ಕಸ್ತೂರಮ್ಮ ಪಾಟೀಲ್, ತಾ.ಪಂ.ಸದಸ್ಯೆ ಲಕ್ಷ್ಮವ್ವ ನೂರೇಶ ಪವಾರ, ಎ.ಪಿ.ಎಂ.ಸಿ. ಸದಸ್ಯ ಸುದೇಶ ವೀರಬಸಪ್ಪ ಪಟ್ಟಣಶೆಟ್ಟಿ, ಇರಕಲ್ಲಗಡ ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ ಶೇಖರಪ್ಪ ನಾಯಕ, ಗ್ರಾ.ಪಂ.ಉಪಾಧ್ಯಕ್ಷ ಶರಣಪ್ಪ ಪಟ್ಟಣಶೆಟ್ಟಿ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಬೆಂಗಳೂರಿನ ರೈಟ್ಸ್ ಲಿಮಿಟೆಡ್‌ನ ಪ್ರಧಾನ ವ್ಯವಸ್ಥಾಪಕಿ ರೇಖಾ ಅವರು ಆಗಮಿಸಲಿದ್ದಾರೆ ಎಂದು ಪ್ರಾಚಾರ್ಯ ಗುಡಿಹಿಂದಿನ ಹೆಚ್.ಎಮ್. ತಿಳಿಸಿದ್ದಾರೆ. 

Advertisement

0 comments:

Post a Comment

 
Top