ಕೊಪ್ಪಳ ಜ.೧೫ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಮತ್ತು ಉತ್ತರ ಕನ್ನಡ ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಜ.೩೧ ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ರಾಜ್ಯ ಮಟ್ಟದ ನಾಲ್ಕನೆಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸಲಾಗಿದೆ ಎಂದು ಶಿವಮೊಗ್ಗಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಮಂಜುನಾಥ ಅವರು ತಿಳಿಸಿದ್ದಾರೆ.
ಮಕ್ಕಳಲ್ಲಿರುವ ಸಾಹಿತ್ಯ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಕಳೆದ ಹಲವು ವರ್ಷಗಳಿಂದ ಈ ಸಮ್ಮೇಳನ ನಡೆಸಲಾಗಿದ್ದು, ೫ ರಿಂದ ೧೨ನೇಯ ತರಗತಿವರೆಗೆ ಓದುತ್ತಿರುವ ಮಕ್ಕಳು ಈ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದ್ದು, ಶಿವಮೊಗ್ಗದಲ್ಲಿ ಈವರೆಗೆ ನಡೆದ ರಾಜ್ಯ ಮಟ್ಟದ ಮೂರು ಸಮ್ಮೇಳನದಲ್ಲಿ ಭಾಗವಹಿಸಿದವರು ಸೇರಿದಂತೆ ಈಗಾಗಲೇ ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಸಮ್ಮೇಳನದಲ್ಲಿ ಭಾಗವಹಿಸಿದವರಿಗೆ ಈ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶವಿದೆ.
ಈಗಾಗಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದು, ಪುಸ್ತಕ ಪ್ರಕಟಿಸಿರುವ ಮಕ್ಕಳು ಯಾವ ಪ್ರಕಾರದಲ್ಲಿ ಪುಸ್ತಕ ಬರೆದಿದ್ದಾರೆ. ಅವುಗಳಿಗೆ ಯಾವುದಾದರೂ ಪ್ರಶಸ್ತಿಗಳು ಬಂದಿವೆಯೇ, ಅವರ ಹೆಸರು, ಓದುತ್ತಿರುವ ತರಗತಿ, ವಿಳಾಸ, ದೂರವಾಣಿ ಸಂಖ್ಯೆ ಇದುವರೆಗೂ ಭಾಗವಹಿಸಿರುವ ಸಮ್ಮೇಳನ ಅಥವಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವ ಮಾಹಿತಿ ಸಂದ ಗೌರವ ಎಲ್ಲಾ ವಿವರಗಳೊಂದಿಗೆ ತಂದೆ, ತಾಯಿ ಅಥವಾ ಶಾಲೆಯ ಮುಖ್ಯಸ್ಥರ ಸಹಿಯೊಂದಿಗೆ ಡಿ.ಮಂಜುನಾಥ, ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರ, ಶಿವಮೊಗ್ಗ ಇವರಿಗೆ ಜ.೨೦ ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಿ.ಮಂಜುನಾಥ ಮೊ. ೯೪೪೯೫೫೨೭೯೫, ೯೪೪೯೫೫೨೭೯೪ ಅಥವಾ ರೋಹಿದಾಸ್ ನಾಯ್ಕ, ಅಧ್ಯಕ್ಷರು, ಉತ್ತರ ಕನ್ನಡ ಜಿಲ್ಲೆ ಮೊ. ೯೪೪೮೩೪೩೧೨೭ ಇವರನ್ನು ಸಂಪರ್ಕಿಸಬಹುದಾಗಿದೆ.
0 comments:
Post a Comment