ಕೊಪ್ಪಳ ಜ.೧೦ ಗಂಗಾವತಿ ತಾಲೂಕು ಕನಕಗಿರಿಯ ಶ್ರೀ ಕನಕಾಚಲಪತಿ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಕುರಿತಂತೆ, ಅರ್ಹರಿಂದ ಅರ್ಜಿ ಸ್ವೀಕರಿಸುವ ದಿನಾಂಕವನ್ನು ಜನವರಿ ೧೭ ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ ೧೯೯೭ ರ ಕಲಂ ೨೫ ರನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ 'ಬಿ' ಮತ್ತು 'ಸಿ' ವರ್ಗದ ಅಧಿಸೂಚಿತ ಸಂಸ್ಥೆಗಳಿಗೆ (ದೇವಸ್ಥಾನಗಳು) ೯ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಬೇಕಾಗಿದ್ದು, ಶ್ರೀ ಕನಕಾಚಲಪತಿ ದೇವಸ್ಥಾನ ಕನಕಗಿರಿ ತಾ|| ಗಂಗಾವತಿ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ವಿಚಾರದಲ್ಲಿ ಆಸಕ್ತ ಭಕ್ತಾಧಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ದೇವಸ್ಥಾನದ ಸದಸ್ಯತ್ವ ಕೋರಿ ಅರ್ಜಿ ಆಹ್ವಾನಿಸಲಾಗಿತ್ತು. ಅಲ್ಲದೆ ಅರ್ಜಿ ಸಲ್ಲಿಸಲು ಕಳೆದ ಡಿ. ೧೫ ಕೊನೆಯ ದಿನಾಂಕವನ್ನಾಗಿ ನಿಗದಿಪಡಿಸಲಾಗಿತ್ತು. ಸದ್ಯ ಕೇವಲ ೧೪ ಅರ್ಜಿಗಳು ಮಾತ್ರ ಸ್ವೀಕೃತವಾಗಿದ್ದು, ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ಜ. ೧೭ ರವರೆಗೆ ವಿಸ್ತರಿಸಲಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿಗಳ ಕಛೇರಿ/ತಹಶೀಲ್ದಾರ ಕಛೇರಿ ಗಂಗಾವತಿ ಇವರಿಗೆ ಜ. ೧೭ ರ ಒಳಗಾಗಿ ಸಲ್ಲಿಸುವಂತೆ ಹಾಗೂ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ
0 comments:
Post a Comment