ಕೊಪ್ಪಳ ಜ.೧೮ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುರುವಾರದಂದು ಮಕ್ಕಳೊಂದಿಗೆ ತೆರೆದಮನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ರಾಜಸ್ಥಾನ ರಾಜ್ಯದ ಐ.ಪಿ.ಎಸ್. ಅಧಿಕಾರಿಗಳಾದ ರಾಹುಲ್ ಜೈನ್, ಪ್ರೀತಿ ರಾಹುಲ್ ಜೈನ್ ಹಾಗೂ ಇತರೆ ಅಧಿಕಾರಿಗಳು, ಲೇಬಗೇರಿ ಗ್ರಾಮದ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ತೆರೆದ ಮನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಹಕ್ಕುಗಳ ಬಗ್ಗೆ, ಬಾಲ್ಯವಿವಾಹ, ಬಾಲಕಾರ್ಮಿಕರ ಬಗ್ಗೆ ಮಾಹಿತಿಯನ್ನು ನೀಡಿದರಲ್ಲದೇ ವಿದ್ಯಾರ್ಥಿಗಳಿಂದ ಕೇಳಲಾದ ಕೆಲವೊಂದು ಪ್ರಶ್ನೆಗಳಿಗೆ ಉತ್ತರವನ್ನು ನೀಡಿದರು. ತೆರೆದ ಮನೆ ಕಾರ್ಯಕ್ರಮ ನಿಯೋಜಿಸಿದ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಿ.ಪಿ.ಐ.ವೆಂಕಟಪ್ಪ ನಾಯಕ ಅವರು ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಪೊಲೀಸ್ ಠಾಣೆಯ ಮಹಾಂತೇಶ ಜಿ.ಸಜ್ಜನ್ ಅವರು ಮಕ್ಕಳಿಗೆ ಠಾಣೆಯಲ್ಲಿ ನಿರ್ವಹಿಸುವ ಎಲ್ಲಾ ಕಡತಗಳ ಬಗ್ಗೆ, ಕೂಲಂಕುಷವಾಗಿ ತಿಳಿಸಿಕೊಟ್ಟರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು, ಜಿಲ್ಲಾ ಪೊಲೀಸ್ ಕಾರ್ಯಾಲಯದ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಘಟಕದ ಸಿಬ್ಬಂದಿಗಳು, ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
0 comments:
Post a Comment