PLEASE LOGIN TO KANNADANET.COM FOR REGULAR NEWS-UPDATES



ಕೊಪ್ಪಳ ಜ.೨೧  ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಇದೇ ಪ್ರಥಮ ಬಾರಿಗೆ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಕೊಪ್ಪಳದಲ್ಲಿ ಭವ್ಯ ಮೆರವಣಿಗೆ ನಡೆಯಿತು.
  ಕೊಪ್ಪಳ ಶಾಸಕ ಸಂಗಣ್ಣ ಕರಡಿ, ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಘವೇಂದ್ರ ಹಿಟ್ನಾಳ್ ಅವರು ನಗರದ ಸಿರಸಪ್ಪಯ್ಯನ ಮಠ ಬಳಿ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.  ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ್, ಗಣ್ಯರಾದ ಕೆ.ಎಂ. ಸಯ್ಯದ್, ಕರಿಯಣ್ಣ ಸಂಗಟಿ, ಯಮನಪ್ಪ ಕಬ್ಬೇರ್ ಸೇರಿದಂತೆ ಹಲವು ಗಣ್ಯಾತಿಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
  ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯ ಮುಂಚೂಣಿಯಲ್ಲಿದ್ದು ಮೆರವಣಿಗೆಗೆ ಭಕ್ತಿ ಭಾವ ಮೂಡಿಸಿದರು, ಡೊಳ್ಳು ಕುಣಿತ ಕಲಾವಿದರೂ ಸೇರಿದಂತೆ ವಿವಿಧ ಕಲಾವಿದರು ಮೆರವಣಿಗೆಗೆ ಮೆರಗು ತಂದರು. ಸಮಾಜದ ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.  ಮೆರವಣಿಗೆಯು ಸಿರಸಪ್ಪಯ್ಯನ ಮಠದಿಂದ ಪ್ರಾರಂಭಗೊಂಡು, ಜವಾಹರ ರಸ್ತೆ ಮೂಲಕ ನಗರದ ಸಾಹಿತ್ಯ ಭವನದವರೆಗೆ ಸಾಗಿಬಂದಿತು.

Advertisement

0 comments:

Post a Comment

 
Top