PLEASE LOGIN TO KANNADANET.COM FOR REGULAR NEWS-UPDATES


- ಶಾಸಕ ಸಂಗಣ್ಣ ಕರಡಿ
  ಕೊಪ್ಪಳ ನಗರದಲ್ಲಿ ಹಾಯ್ದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-೬೩ ರ ರಸ್ತೆ ಅಭಿವೃದ್ಧಿ ಹಾಗೂ ಈ ರಸ್ತೆಯಲ್ಲಿನ ಪ್ರಮುಖ ೦೫ ವೃತ್ತಗಳ ಅಭಿವೃದ್ಧಿಗೆ ಸರ್ಕಾರ ೧೭. ೩೮ ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿ, ೫. ೭೯ ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ತಿಳಿಸಿದ್ದಾರೆ.
  ಕೊಪ್ಪಳ ನಗರದ ಪ್ರಮುಖ ರಸ್ತೆಯಾಗಿರುವ ರಾಷ್ಟ್ರೀಯ ಹೆದ್ದಾರಿ-೬೩ ರ ರಸ್ತೆ ಅಭಿವೃದ್ಧಿ ಹಾಗೂ ನಗರದ ಪ್ರಮುಖ ೦೫ ವೃತ್ತಗಳನ್ನು ೧೭. ೩೮ ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಜ. ೩೧ ರಂದು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಹೆಚ್ಚುವರಿ ೫. ೭೯ ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿದೆ.  ನಗರೋತ್ಥಾನ ಯೋಜನೆಯಡಿ ಮತ್ತು ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆಯಾಗಿ, ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು.  ರಸ್ತೆ ಹಾಗೂ ಪ್ರಮುಖ ವೃತ್ತಗಳ ಅಭಿವೃದ್ಧಿಗೆ ಉಂಟಾಗಿದ್ದ ಅನುದಾನದ ಕೊರತೆ ಇದೀಗ ನೀಗಿದಂತಾಗಿದೆ ಅಲ್ಲದೆ, ಇದರ ಜೊತೆಗೆ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನಗರದ ಬಸವೇಶ್ವರ ವೃತ್ತ, ಮುಂಡರಗಿ ಭೀಮರಾಯ ವೃತ್ತ, ಕನಕದಾಸ ವೃತ್ತ, ಅಶೋಕ ವೃತ್ತ ಹಾಗೂ ಶಾಸ್ತ್ರಿ ವೃತ್ತಗಳ ಅಭಿವೃದ್ಧಿಗೆ ಸರ್ಕಾರ ೫. ೭೯ ಕೋಟಿ ರೂ.ಗಳ ಅನುದಾನವನ್ನು ಸದ್ಯ ಬಿಡುಗಡೆ ಮಾಡಿದೆ.  ಈ ಅನುದಾನ ಒದಗಿಸುವದರ ಜೊತೆಗೆ ೨೦೧೨-೧೩ನೇ ಸಾಲಿನ ಅಪೆಂಡಿಕ್ಸ್-ಇ ನಲ್ಲಿ ಸೇರ್ಪಡೆಗೊಳಿಸಿ, ನಿರ್ಮಾಣ ಮಾಡುವ ಕಾಮಗಾರಿಯನ್ನು ಕೈಗೊಳ್ಳಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.  ನಗರದ ಪ್ರಮುಖ ರಸ್ತೆ ಹಾಗೂ ಪ್ರಮುಖ ವೃತ್ತಗಳ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಒದಗಿಸಿದ್ದಕ್ಕಾಗಿ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಅಧಿಕಾರಿಗಳಿಗೆ ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

0 comments:

Post a Comment

 
Top