ಕೊಪ್ಪಳ ಜ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವತಿಯಿಂದ ತಾಲೂಕಿನ ಗಿಣಿಗೇರಾ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಯಿತು.
ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಪಿ.ಎಸ್.ಐ ಮಹಾಂತೇಶ.ಜಿ.ಸಜ್ಜನ ಅವರು ವಿದ್ಯಾರ್ಥಿಗಳಿಗೆ, ತಮ್ಮ ಪೋಷಕರು ಕುಡಿದು ವಾಹನ ಚಲಾಯಿಸದಂತೆ ನೋಡಿಕೊಳ್ಳಬೇಕು. ಕುಡಿದು ವಾಹನ ಚಾಲನೆ ಮಾಡುವುದರಿಂದ ಆಗುವ ಅನಾಹುತಗಳ ಬಗ್ಗೆ ತಮ್ಮ ಪೊಷಕರಿಗೆ ಮನವರಿಕೆ ಮಾಡಲು ಶಾಲೆಯ ವಿದ್ಯಾರ್ಥಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ರಸ್ತೆ ಸಂಚಾರ ನಿಯಮಗಳು, ರಸ್ತೆ ದಾಟುವಾಗ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ತಿಳಿಸಲಾಯಿತು. ಶಾಲೆಯ ವಿದ್ಯಾರ್ಥಿನಿಯರಿಗೆ ಇತ್ತೀಚಿನ ದಿನಗಳಲ್ಲಿ ನೆಡೆಯುತ್ತಿರುವ ಅತ್ಯಾಚಾರಗಳ ಬಗ್ಗೆ ಅಪರಿಚತರಿಂದ ದೂರವಿರಲು ಹಾಗೂ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಠಾಣೆಗೆ ತಿಳಿಸಲು ತಿಳುವಳಿಕೆ ನೀಡದರು. ನಂತರ ಶಾಲೆಯ ವಿದ್ಯಾರ್ಥಿಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹಾಗೂ ರಸ್ತೆಗಳಲ್ಲಿ ಸಂಚರಿಸಿ ಈ ಬಗ್ಗೆ ಜನ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಪಿ.ಎಂ ಮಾಲೀಪಾಟೀಲ್.ಎ. ಬಸವರಾಜ, ಶರಣಬಸಪ್ಪ ಹಾಗೂ ಪೊಲೀಸ ಸಿಬ್ಬಂದಿಗಳಾದ ರಾಜಮಹ್ಮದ, ಅಂದಪ್ಪ , ಸಿದ್ದಪ್ಪ, ಶಿವಪ್ಪ ಮುಂತಾದವರು ಉಪಸ್ಥಿತರಿದ್ದರು.
0 comments:
Post a Comment