ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ :
ಕೊಪ್ಪಳ ಜ.೧೬ ): ಕೊಪ್ಪಳ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಜ. ೨೧ ರಿಂದ ೨೩ ರವರೆಗೆ ಮೂರು ದಿನಗಳ ಕಾಲ ಪ್ರೌಢಶಾಲಾ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಕೊಪ್ಪಳದ ಬಾಲಕರ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಜ. ೨೧ ರಂದು ಬೆಳಿಗ್ಗೆ ೧೦ ಗಂಟೆಗೆ ಕಾರ್ಯಾಗಾರದ ಉದ್ಘಾಟನೆ ನೆರವೇರಲಿದೆ. ಈ ಕಾರ್ಯಾಗಾರದಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನರಹಿತ, ಪ್ರೌಢಶಾಲಾ ಗಣಿತ/ಹಿಂದಿ/ಇಂಗ್ಲೀಷ್ ಬೋಧಿಸುವ ಶಿಕ್ಷಕರು ಪಾಲ್ಗೊಳ್ಳಬೇಕಾಗಿರುತ್ತದೆ. ಸಂಬಂಧಪಟ್ಟ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಸಕಾಲದಲ್ಲಿ ಶಿಕ್ಷಕರನ್ನು ಬಿಡುಗಡೆಗೊಳಿಸಿ, ಕಾರ್ಯಾಗಾರದಲ್ಲಿ ಭಾಗವಹಿಸಲು ಸೂಚಿಸಬೇಕು. ಕಾರ್ಯಾಗಾರದ ಯಶಸ್ವಿಗೆ ಸಹಕರಿಸಬೇಕು ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಬಸವರಾಜಯ್ಯ ತಿಳಿಸಿದ್ದಾರೆ.
0 comments:
Post a Comment