ಕೊಪ್ಪಳ ಜ.೧೮ : ವಾರ್ತಾ ಇಲಾಖೆಯು ಸರ್ಕಾರಿ ಪಾಲಿಟೆಕ್ನಿಕ್ ಕೊಪ್ಪಳ, ಎನ್.ಎಸ್.ಎಸ್. ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ೧೫೦ನೇ ಜಯಂತಿ ಅಂಗವಾಗಿ 'ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ' ಕುರಿತ ವಿಚಾರಸಂಕಿರಣವನ್ನು ಜ. ೧೯ ರಂದು ಬೆಳಿಗ್ಗೆ ೧೦ ಗಂಟೆಗೆ ತಾಲೂಕಿನ ಯತ್ನಟ್ಟಿಯ ಶ್ರೀ ಬಸವರಾಜೇಂದ್ರ ಮಠದ ಆವರಣದಲ್ಲಿ ಹಮ್ಮಿಕೊಂಡಿದೆ.
ಕೊಪ್ಪಳ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಎ.ಆರ್. ಶಿವಕುಮಾರ್ ಅವರು ವಿಚಾರಸಂಕಿರಣದ ಉದ್ಘಾಟನೆ ನೆರವೇರಿಸುವರು. ಬಸವರಾಜೇಂದ್ರ ವಿರಕ್ತಮಠದ ಶ್ರೀ ಶಂಭುಲಿಂಗದೇವರು ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದು, ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿ ಜೆ. ಕೊಂಡಪ್ಪ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಪಿ.ಜಿ. ಪಾಂಡುರಂಗಶೆಟ್ಟಿ, ಗ್ರಾ.ಪಂ. ಸದಸ್ಯರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಹಿರೇಸಿಂದೋಗಿ ಸರ್ಕಾರಿ ಪ.ಪೂ. ಕಾಲೇಜು ಉಪನ್ಯಾಸಕ ಶಂಕ್ರಯ್ಯ ಅಬ್ಬಿಗೇರಿಮಠ ಅವರು ಈ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡುವರು ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವರ್ ಬಿ.ವಿ. ತಿಳಿಸಿದ್ದಾರೆ.
0 comments:
Post a Comment