ಕೊಪ್ಪಳ ಜ.೧೬ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದಲ್ಲಿ ಇತ್ತೀಚಿಗೆ 'ಜೀವಂತವಾಗಿರಲು ಕುಡಿದು ವಾಹನ ಚಾಲನೆ ಮಾಡಬೇಡಿ' ಎಂಬ ಘೋಷ ವಾಕ್ಯದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹವನ್ನು ಯಶಸ್ವಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಾದೇಶಿಕ ಸಾರಿಗೆ ಅಧಿಕಾರಿ ಪಾಂಡುರಂಗಶೆಟ್ಟಿ ಅವರು ಮಾತನಾಡಿ, ಅಪಘಾತದಿಂದಾಗುವ ಹಾನಿಗಳು, ರಸ್ತೆಯಲ್ಲಿ ಪಾಲಿಸಬೇಕಾದ ರಸ್ತೆ ಸುರಕ್ಷತೆಯ ನಿಯಮಗಳ ಬಗ್ಗೆ ಚಾಲನಾ ಸಿಬ್ಬಂದಿಗಳಿಗೆ ವಿವರಿಸಿದರು. ನಂತರ ವಿಭಾಗೀಯ ನಿಯಂತ್ರಣಾಧಿಕಾರಿ ಮೀನುಲ್ಲಾ ಸಾಹೇಬ ಅವರು ಮಾತನಾಡಿ, ಅಪಘಾತದಿಂದ ಸಂಸ್ಥೆಗೆ ಆಗುತ್ತಿರುವ ಆರ್ಥಿಕ ಹಾನಿಯ ಬಗ್ಗೆ ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿಗಳು ಕುಟುಂಬಗಳು, ಎದುರಿಸುತ್ತಿರುವ ಸಂಕಷ್ಟಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಮೋಟಾರ ವಾಹನ ನಿರೀಕ್ಷಕ ಶ್ಯಾನಭೋಗ, ವಿಭಾಗೀಯ ತಾಂತ್ರಿಕ ಶಿಲ್ಪಿ ನಾರಾಯಣ ಗೌಡಗೇರಿ, ಸಹಾಯಕ ಲೆಕ್ಕಾಧಿಕಾರಿ ಎನ್.ವಿ.ಉಪಾಧ್ಯಾಯ ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಗಂಗಾವತಿ, ಕುಷ್ಟಗಿ, ಯಲಬುರ್ಗಾ ಹಾಗೂ ಕುಕನೂರು ಘಟಕಗಳಲ್ಲಿಯೂ ರಸ್ತೆ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಯಿತು.
0 comments:
Post a Comment