PLEASE LOGIN TO KANNADANET.COM FOR REGULAR NEWS-UPDATES


  ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂಡ ಕೊಡಮಾಡುವ ಪ್ರಸಕ್ತ ಸಾಲಿನ ಪರಿಸರ ಮಿತ್ರ ಶಾಲೆ ಪ್ರಶಸ್ತಿಯನ್ನು ಯಲಬುರ್ಗಾ ತಾಲೂಕು ಕುಡಗುಂಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡೆದುಕೊಂಡಿದೆ.
  ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ಕುಡಗುಂಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
  ಕಾರ್ಯಕ್ರಮದಲ್ಲಿ ಪರಿಸರ ಅಧಿಕಾರಿ ವಿ. ಆನಂದ್, ಹಿರಿಯ ವಿಭಾಗೀಯ ಪರಿಸರ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ವಿವಿಧ ಶಾಲಾ ಮಕ್ಕಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.  ಕೊಪ್ಪಳ ಜಿಲ್ಲೆಯಿಂದ ಆಯ್ಕೆಯಾದ ೧೦- ಹಸಿರು ಶಾಲೆಗಳು, ೧೦- ಕಿತ್ತಳೆ ಶಾಲೆಗಳಿಗೆ ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Advertisement

0 comments:

Post a Comment

 
Top