: ಬೆಂಗಳೂರು ಮಧ್ಯಸ್ಥಿಕಾ ಕೇಂದ್ರ, ಕೊಪ್ಪಳ ಜಿಲ್ಲಾ ಮಧ್ಯಸ್ಥಿಕಾ ಕೇಂದ್ರ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನ್ಯಾಯವಾದಿಗಳಿಗಾಗಿ ೦೫ ದಿನಗಳ ಮಧ್ಯಸ್ಥಿಕಾ ತರಬೇತಿ ಕಾರ್ಯಕ್ರಮ ಫೆ. ೧೬ ರಿಂದ ೨೦ ರವರೆಗೆ ಕೊಪ್ಪಳ ಜಿ.ಪಂ. ಸಭಾಂಗಣದಲ್ಲಿ ನಡೆಯಲಿದೆ.
ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕೊಪ್ಪಳ ಜಿಲ್ಲೆ ಆಡಳಿತಾತ್ಮಕ ನ್ಯಾಯಾಧೀಶರಾದ ಎಸ್.ಎನ್. ಸತ್ಯನಾರಾಯಣ ಅವರು ಫೆ. ೧೬ ರಂದು ಬೆಳಿಗ್ಗೆ ೯-೩೦ ಗಂಟೆಗೆ ಜಿ.ಪಂ. ಸಭಾಂಗಣದಲ್ಲಿ ಜರುಗಲ್ಲಿ ನೆರವೇರಿಸುವರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀಕಾಂತ ದಾ. ಬಬಲಾದಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎ.ವಿ. ಕಣವಿ ಅವರು ಅತಿಥಿಗಳಾಗಿ ಭಾಗವಹಿಸುವರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಯೂ ಆಗಿರುವ ಸಿವಿಲ್ ಜಡ್ಜ್ ಕೆ. ಶಿವರಾಮ್ ತಿಳಿಸಿದ್ದಾರೆ.
0 comments:
Post a Comment