PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ,ಫೆ.೧೨: ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಂಗ ಸಂಸ್ಥೆಯಾಗಿರುವ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಪತ್ರಕರ್ತರ ೩೧ನೇ ರಾಜ್ಯ ಮಟ್ಟದ ಮಹಾಸಮ್ಮೇಳನ ದಿ.೧೭ ರ ರವಿವಾರ ಚಿತ್ರದುರ್ಗದ ಮುರುಘಾಮಠದ ಆವರಣದಲ್ಲಿ ಬೆಳಿಗ್ಗೆ ೧೦.೩೦ ಕ್ಕೆ ಉದ್ಘಾಟನೆ ಜರುಗಲಿದೆ.
ಅದೇ ದಿನ ಮಧ್ಯಾಹ್ನ ಎರಡು ವಿಚಾರ ಸಂಕೀರಣ ನಂತರ ಸಂಜೆ ಸಮಾರೋಪ ಸಮಾರಂಭ ಜರುಗಲಿದ್ದು, ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಸೇರಿದಂತೆ ಇತರ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಪತ್ರಿಕೋದ್ಯಮದ ಇಂದಿನ ಆಗು-ಹೋಗುಗಳನ್ನು ಚರ್ಚಿಸುವ ವಿಚಾರ ಸಂಕೀರಣದಲ್ಲಿ ಪ್ರತಿಷ್ಠಿತ ಪತ್ರಕರ್ತರು ಭಾಗವಹಿಸಿ ವಿಷಯ ಮಂಡಿಸಲಿದ್ದಾರೆ.
ಈ ಸಮ್ಮೇಳನದಲ್ಲಿ ರಾಜ್ಯದ ಎಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹೊಂದಿರುವ ಪತ್ರಕರ್ತರು ಭಾಗವಹಿಸಲಿದ್ದಾರೆ. ಅದರಂತೆ ನಮ್ಮ ಕೊಪ್ಪಳ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹೊಂದಿರುವ ಎಲ್ಲಾ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ದಿ.೧೭ ರ ಸಮ್ಮೇಳನದಲ್ಲಿ ಭಾಗವಹಿಸಬೇಕೆಂದು ಹಾಗೂ ಆಸಕ್ತರು ಕೂಡಲೇ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ಹರೀಶ ಹೆಚ್.ಎಸ್., ಜಿಲ್ಲಾ ಅಧ್ಯಕ್ಷ ನಾಗರಾಜ ಸುಣಗಾರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಾದಿಕ್ ಅಲಿ, ಕೋಶಾಧ್ಯಕ್ಷ ಹನುಮಂತ ಹಳ್ಳಿಕೇರಿ  ಸಂಪರ್ಕಿಸಲು ತಿಳಿಸಲಾಗಿದೆ.

Advertisement

0 comments:

Post a Comment

 
Top