PLEASE LOGIN TO KANNADANET.COM FOR REGULAR NEWS-UPDATES


  ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ೨೦೧೨-೧೩ನೇ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಾಯೋಜಕತ್ವದಲ್ಲಿ ಸ್ಥಾಪಿಸಲಾಗಿದ್ದು, ವೈಜ್ಞಾನಿಕ ಕಾರ್ಯಕ್ರಮಗಳು, ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ. ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ತೋರಿದ ಆಯ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಗುತ್ತದೆ.
ನಿಗದಿತ ಅರ್ಜಿಗಳನ್ನು ಭರ್ತಿಮಾಡಿ ಮುಖ್ಯೋಪಾಧ್ಯಾಯರು/ಪ್ರಾಂಶುಪಾಲರ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ನಾಮ-ನಿರ್ದೇಶನಗಳನ್ನು ಮೊದಲು ಜಿಲ್ಲಾ ಹಂತದಲ್ಲಿ ನಂತರ ರಾಜ್ಯಮಟ್ಟದಲ್ಲಿ ಪರಿಶೀಲಿಸಿ ಅತ್ಯುತ್ತಮವೆಂದು ಪರಿಗಣಿಸಲ್ಪಟ್ಟ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಯುವ ವಿಜ್ಞಾನಿಯಾಗಿ ಆಯ್ಕೆಯಾಗುತ್ತಾರೆ. ಯುವವಿಜ್ಞಾನಿ ಪ್ರಶಸ್ತಿ ಆಯ್ಕೆಗಾಗಿ  ವಿದ್ಯಾರ್ಥಿ/ವಿದ್ಯಾರ್ಥಿನಿಯು ಕಳೆದ ಮೂರು ಶೈಕ್ಷಣಿಕ ವರ್ಷಗಳಲ್ಲಿ (೨೦೧೦-೧೧, ೨೦೧೧-೧೨, ೨೦೧೨-೧೩) ಗಳಲ್ಲಿ ಡಿ.ಎಸ್.ಇ.ಆರ್.ಟಿ., ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತಿತರರ ಸಂಸ್ಥೆಗಳಿಂದ ಆಯೋಜನೆಗೊಂಡ ಮಕ್ಕಳ ವಿಜ್ಞಾನ ಗೋಷ್ಠಿ, ಪ್ರತಿಭಾ ಕಾರಂಜಿ, ವಿಜ್ಞಾನ ನಾಟಕ ಸ್ಪರ್ಧೆ, ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ, ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಇತ್ಯಾದಿಗಳಲ್ಲಿ ಭಾಗವಹಿಸಿ ಪಡೆದುಕೊಂಡ ಬಹುಮಾನ, ಪ್ರಶಸ್ತಿ, ಗುಣಾಂಕಗಳು ಮತ್ತು ಎನ್.ಟಿ.ಎಸ್.ಸಿ. ಪರೀಕ್ಷಾ ಫಲಿತಾಂಶಗಳು ಇತ್ಯಾದಿ ಅಂಶಗಳನ್ನು ಪರಿಗಣಿಸಲಾಗುವುದು. ಅರ್ಹ ಅಭ್ಯರ್ಥಿಗಳು ೧೪-೧೮ ವರ್ಷದ ಪ್ರೌಢಶಾಲಾ/ ಪದವಿ ಪೂರ್ವ ವಿದ್ಯಾರ್ಥಿಗಳಾಗಿರಬೇಕು, ವಯೋಮಿತಿ ೨೦೧೩ನೇ ಏಪ್ರಿಲ್ ೧೦ಕ್ಕೆ ೧೮ ವರ್ಷಗಳನ್ನು ಮೀರಿರಬಾರದು. 
ಜಿಲ್ಲಾ ಮಟ್ಟದಲ್ಲಿ ಪ್ರಥಮ ೩೦೦೦ ರೂ, ದ್ವಿತೀಯ ೨೦೦೦ರೂ, ಮತ್ತು ತೃತೀಯ ೧೦೦೦ ರೂ. ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಥಮ ೧೦ಸಾವಿರ ರೂ., ದ್ವಿತೀಯ ೭ ಸಾವಿರ ಮತ್ತು ತೃತೀಯ ೫ ಸಾವಿರ ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳಿಂದ ಪುರಸ್ಕರಿಸಲಾಗುವುದು. ನಿಗದಿತ ನಮೂನೆಯಲ್ಲಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಮಾ.೧೦ ರ ಒಳಗಾಗಿ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಕೊಪ್ಪಳ ಇವರಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಭವನ ನಂ.೨೪/೨, ೨೧ನೇ ಮುಖ್ಯ ರಸ್ತೆ, ಬನಶಂಕರಿ ೨ನೇ ಹಂತ, ಬೆಂಗಳೂರು-೭೦ ದೂರವಾಣಿ ೦೮೦-೨೬೭೧೮೯೩೯ ಇವರನ್ನು ಸಂಪರ್ಕಿಸಬಹುದಾಗಿದೆ  

Advertisement

0 comments:

Post a Comment

 
Top