
ಸ್ಥಳೀಯ ಸಂಸ್ಥೆ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಈ ಬಾರಿಯ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಛತ್ರಪತಿ ಶಿವಾಜಿ ಜಯಂತಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿರುವುದರಿಂದ, ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಫೆ. ೧೯ ರಂದು ಶಿವಾಜಿ ಜಯಂತಿಯನ್ನು ಜಿಲಾಡಳಿತದ ವತಿಯಿಂದ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು. ಅಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಭಕ್ತಿ ನಮನ ಸಲ್ಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದರು.
ಸಭೆಯಲ್ಲಿ ನಗರಸಭೆ ಪೌರಾಯುಕ್ತೆ ಬಿ.ಎಂ.ಅಶ್ವಿನಿ, ತಹಶೀಲ್ದಾರ್ ಬಿ.ಎಲ್.ಗೋಠೆ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಎಸ್.ಹೆಚ್.ಅಂಗಡಿ, ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರಾದ ನಾಗೇಶ ಬಡಿಗೇರ, ಮಾರುತಿ ಕಾರಟಗಿ (ನಿಕ್ಕಂ), ಹನುಮಂತಪ್ಪ ಬೂದಗುಂಪಿ, ಗವಿಸಿದ್ದಪ್ಪ ಪವಾರ್, ಯಂಕಪ್ಪ ಜಾಲಿಹಾಳ, ಆನಂದ ಸಿಂಧೆ, ಅಮಿತ್ ಕಂಪ್ಲಿಕರ್, ಚಂದ್ರಪ್ಪ ಬಡಿಗೇರ, ಲಕ್ಷ್ಮಣ ಕಾರಟಗಿ, ರಮೇಶ ಕನ್ಯಾಳ, ಯಂಕಪ್ಪ ಕಂದಕೂರ, ಸುಮಂತರಾವ್ ಪಟವಾರಿ, ಗವಿಸಿದ್ದಪ್ಪ ಮರಾಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
0 comments:
Post a Comment