PLEASE LOGIN TO KANNADANET.COM FOR REGULAR NEWS-UPDATES


  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯತಿ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರಧಾನ ಸಮಾರಂಭ ಫೆ.೨೮ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ನಡೆಯಲಿದೆ.
ಸಮಾರಂಭ ಉದ್ಘಾಟನೆಯನ್ನು ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್. ವೀರಣ್ಣ ಅವರು ಭಾಗವಹಿಸುವರು ಎಂದು ಪರಿಸರ ಅಧಿಕಾರಿ ವಿ. ಆನಂದ್  ತಿಳಿಸಿದ್ದಾರೆ.



Advertisement

0 comments:

Post a Comment

 
Top