ಜಿಲ್ಲೆಯಲ್ಲಿ ರಾಜ್ಯ ಲೋಕಸೇವಾ ಆಯೋಗದಿಂದ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರದಿಂದ ಫೆ.೨೩ ಹಾಗೂ ೨೪ ರಂದು ನಡೆಯಲಿರುವ ಪಂಚಾಯತ್ ರಾಜ್ ಇಲಾಖೆಯಲ್ಲಿನ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಈ ಕುರಿತು ಚರ್ಚಿಸಲು ಫೆ.೧೮ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಹಿಸಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕ ಜಿ.ಹೆಚ್.ವೀರಣ್ಣ ತಿಳಿಸಿದ್ದಾರೆ.
0 comments:
Post a Comment