PLEASE LOGIN TO KANNADANET.COM FOR REGULAR NEWS-UPDATES


ಬೆಂಗಳೂರು-ಮೈಸೂರು ಹೆದ್ದಾರಿಯ ರಾಮನಗರ ಸಮೀಪದ ಜಾನಪದ ಲೋಕದಲ್ಲಿ ನಡೆದ ೩ ದಿನಗಳ ಲೋಕೋತ್ಸವದಲ್ಲಿ ಫೆ.೧೦ ರಂದು ಜಾನಪದ ಕಲೆಗೆ ಅಪಾರ ಸೇವೆ ಸಲ್ಲಿಸಿರುವ ಜಿಲ್ಲೆಯ ಜಾನಪದ ಕಲಾವಿದರಾದ ಬೀರಪ್ಪ ಗೂಳಪ್ಪ ಯಡಿಯಾಪುರ, ಮಾರೆಪ್ಪ ಮಾರೆಪ್ಪ ದಾಸರ ಅವರಿಗೆ ಜಾನಪದ ಲೋಕ ಪ್ರಶಸ್ತಿ ಹಾಗೂ ಏಕತಾರಿ ತತ್ವಪದಕಾರರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಹಕ ಅಧಿಕಾರಿ ಎಸ್. ರಾಜಾರಾಂ ಅವರಿಗೆ ಜಾನಪದ ಲೋಕ ವಿಶೇಷ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. 
ರಂಗಭೂಮಿ ಕಲಾವಿದ. ರಾಜ್ಯ ಸಭಾ ಸದಸ್ಯೆ ಬಿ. ಜಯಶ್ರೀ, ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಗೋ.ರು.ಚನ್ನಬಸಪ್ಪ ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಹಿ.ಚಿ.ಬೋರಲಿಂಗಯ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿಸಿಕೊಟ್ಟರು. 
ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಟಿ. ತಿಮ್ಮೇಗೌಡ, ಮ್ಯಾನೇಜಿಂಗ್ ಟ್ರಸ್ಟ ಇಂದಿರಾ ಬಾಲಕೃಷ್ಣ ಪ್ರಜಾವಾಣಿ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ಪದ್ಮರಾಜ ದಂಡಾವತಿ, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಎ. ಪ್ರೊನ್ನಪ್ಪ , ಮಲೆಮಹಾದೇಶ್ವರ ದೇವಸ್ಥಾನ ಆಡಳಿತಾಧಿಕಾರಿ ಜೈವಿಭವ ಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. 
ಕರ್ನಾಟಕ ಜಾನಪದ ಪರಿಷತ್ತು ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಆಕಳವಾಡಿ ಸೇರಿದಂತೆ ವಿವಿಧ ಜಿಲ್ಲಾ ಘಟಕದ ಅಧ್ಯಕ್ಷರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ರಾಮನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ರಾಜು ಅಧ್ಯಕ್ಷತೆ ವಹಿಸಿದ್ದರು . 

Advertisement

0 comments:

Post a Comment

 
Top