- ಶಿವರಾಮಗೌಡ
ಕೊಪ್ಪಳ ಫೆ. ೦೭ ರಾಜ್ಯದಲ್ಲಿ ಉಂಟಾಗಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ಇನ್ನೆರಡು ದಿನಗಳಲ್ಲಿ ಪರಿಹರಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ಕೊಪ್ಪಳ ಸಂಸದ ಶಿವರಾಮಗೌಡ ಅವರು ತಿಳಿಸಿದ್ದಾರೆ.
ವಿದ್ಯುತ್ ತೀವ್ರ ಅಭಾವದಿಂದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿಗಳು ಉಡುಪಿಯ ವಿದ್ಯುತ್ ಜನರೇಟಿಂಗ್ ಘಟಕ ಪ್ರಾರಂಭದ ಸಮಸ್ಯೆಯನ್ನು ಪರಿಹರಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ವಿದ್ಯುತ್ ಸಮಸ್ಯೆ ನೀಗಲಿದೆ ಎಂದು ಭರವಸೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಂಸದ ಶಿವರಾಮಗೌಡ ತಿಳಿಸಿದ್ದಾರೆ.
0 comments:
Post a Comment