PLEASE LOGIN TO KANNADANET.COM FOR REGULAR NEWS-UPDATES


  ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಿಗೆ ಸಂಬಂಧಿಸಿದಂತೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
  ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಫೆ. ೧೬ ರಂದು ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆ ಅಂದಿನಿಂದಲೇ ಪ್ರಾರಂಭಗೊಳ್ಳಲಿದೆ.  ನಾಮಪತ್ರ ಸಲ್ಲಿಸಲು ಫೆ. ೨೩ ಕೊನೆಯ ದಿನವಾಗಿರುತ್ತದೆ.  ಫೆ. ೨೫ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಫೆ. ೨೭ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ.  ಮತದಾನವು ಮಾ. ೦೭ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ನಿಗದಿತ ಮತಗಟ್ಟೆಗಳಲ್ಲಿ ನಡೆಯಲಿದೆ.  ಮರು ಮತದಾನದ ಅವಶ್ಯಕವಿದ್ದಲ್ಲಿ ಅಂತಹ ಮತದಾನ ಮಾ. ೦೯ ರಂದು ನಡೆಸಲಾಗುವುದು.  ಮತಗಳ ಎಣಿಕೆ ಕಾರ್ಯ ಮಾರ್ಚ್ ೧೧ ರಂದು ಬೆಳಿಗ್ಗೆ ೮ ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ಮಾ. ೧೧ ರ ಒಳಗಾಗಿ ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು. 
  ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿರುವುದರಿಂದ ನೀತಿ ಸಂಹಿತೆ ಫೆ. ೧೫ ರಿಂದ ಜಾರಿಗೆ ಬರಲಿದೆ.  ನೀತಿ ಸಂಹಿತೆಯು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಮಾತ್ರ ಅನ್ವಯವಾಗುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಉಪಕಾರ್ಯದರ್ಶಿಗಳು ತಿಳಿಸಿದ್ದಾರೆ.

Advertisement

0 comments:

Post a Comment

 
Top