: ಕೊಪ್ಪಳ ಜಿಲ್ಲೆಯಾದ್ಯಂತ ಎರಡನೆ ಹಂತದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ೫ ವರ್ಷದೊಳಗಿನ ಒಟ್ಟು ೨೦೪೮೬೮ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಶೇ. ೯೯. ೯೫ ರಷ್ಟು ಸಾಧನೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹಾದೇವಸ್ವಾಮಿ ಅವರು ತಿಳಿಸಿದ್ದಾರೆ.
ಫೆ. ೨೪ ರಿಂದ ೨೭ ರವರೆಗೆ ಜಿಲ್ಲೆಯಲ್ಲಿ ಜರುಗಿದ ಎರಡನೆ ಹಂತದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳು, ಕ್ಲಬ್‌ಗಳು, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಶೇ. ೯೯. ೯೫ ರಷ್ಟು ಸಾಧನೆ ಮಾಡಲಾಗಿದೆ. ಫೆ. ೨೪ ರಂದು ಲಸಿಕಾ ಕೇಂದ್ರಗಳಲ್ಲಿ ೧೬೩೪೯೬ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಯಿತು. ಫೆ. ೨೫ ರಿಂದ ೨೭ ರವರೆಗೆ ಮನೆ, ಮನೆಗೆ ಭೇಟಿ, ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಉಳಿದ ಮಕ್ಕಳಿಗೆ ಪೋಲಿಯೋ ಹನಿ ನೀಡಲಾಗಿದೆ. ಕೊಪ್ಪಳ ತಾಲೂಕಿನಲ್ಲಿ ೭೮೫೧೩ ಮನೆಗಳಿಗೆ ಭೇಟಿ ನೀಡಲಾಗಿದ್ದು, ಒಟ್ಟಾರೆ ೫೮೪೭೯ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗಿದೆ. ಗಂಗಾವತಿ ತಾಲೂಕಿನಲ್ಲಿ ೯೪೨೫೭ ಮನೆಗಳಿಗೆ ಭೇಟಿ ನೀಡಲಾಗಿದ್ದು, ೬೮೨೮೩ ಮಕ್ಕಳಿಗೆ ಪೋಲಿಯೋ ಹನಿ ನೀಡಲಾಗಿದೆ. ಕುಷ್ಟಗಿ ತಾಲೂಕಿನಲ್ಲಿ ೫೫೫೮೨ ಮನೆಗಳಿಗೆ ಭೇಟಿ ನೀಡಿದ್ದು, ಇಲ್ಲಿ ೪೨೦೯೮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗಿದೆ. ಯಲಬುರ್ಗಾ ತಾಲೂಕಿನಲ್ಲಿ ೫೬೪೬೨ ಮನೆಗಳಿಗೆ ಭೇಟಿ ನೀಡಿದ್ದು, ೩೬೦೦೮ ಮಕ್ಕಳಿಗೆ ಪೋಲಿಯೋ ಹನಿ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹಾದೇವಸ್ವಾಮಿ ತಿಳಿಸಿದ್ದಾರೆ.
0 comments:
Post a Comment