ಹೈದ್ರಾಬಾಧ್-ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ೩೭೧ನೇ ಕಲಂ ತಿದ್ದುಪಡಿ ಸೌಲಭ್ಯ ಜಾರಿಯಾಗುವಲ್ಲಿ ಪೂರಕವಾಗಿ ಈ ಭಾಗಕ್ಕೆ ಹೆಚ್ಚುವರಿ ಅನುದಾನ ಒದಗಿಸುವ ಮೂಲಕ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ ಎಂದು ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮಂಡಿಸಿರುವ ೨೦೧೩-೧೪ನೇ ಸಾಲಿನ ಆಯ-ವ್ಯಯ ಕುರಿತಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ಆಡಳಿತಾತ್ಮಕ ದೃಷಿಯಿಂದ ಕೊಪ್ಪಳ ಜಿಲ್ಲೆಯ ಕುಕನೂರು, ಕಾರಟಗಿ ಮತ್ತು ಕುಕನೂರು ಸೇರಿದಂತೆ ರಾಜ್ಯದಲ್ಲಿ ಒಟ್ಟು ೪೩ ಹೊಸ ತಾಲೂಕುಗಳನ್ನು ಘೋಷಿಸಿರುವುದು ಸ್ವಾಗತಾರ್ಹ ವಿಷಯವಾಗಿದೆ. ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ನೂತನ ತಾಲೂಕುಗಳಿಗೆ ಸಾರ್ವಜನಿಕರ ಸಂಪರ್ಕಕ್ಕೆ ಅನುಕೂಲವಾಗುವ ರೀತಿಯಲ್ಲಿ ವೈಜ್ಞಾನಿಕವಾಗಿ ಗ್ರಾಮಗಳ ಹಂಚಿಕೆ ಮಾಡಬೇಕು. ಇನ್ನು ೨ ರೂ.ಗೆ ಅಕ್ಕಿ ವಿತರಿಸುವ ಯೋಜನೆಯನ್ನು ಜಾರಿಗೊಳಿಸಿರುವುದು ಬಡವರಿಗೆ ವರದಾನವಾಗಿದೆ. ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳನ್ನು ಘೋಷಿಸಲಾಗಿದ್ದು, ಶೈಕ್ಷಣಿಕ ಅಸಮತೋಲನ ನಿವಾರಣೆಗೆ ಆದ್ಯತೆ ನೀಡಿರುವುದು ಶ್ಲಾಘನೀಯ. ಆಲಮಟ್ಟಿ-ಕೂಡಲಸಂಗಮ-ಕೊಪ್ಪಳ ರೈಲ್ವೆ ಮಾರ್ಗಕ್ಕೆ ಅನುದಾನ ನಿಗದಿಪಡಿಸುವ ಮೂಲಕ ಸಾರಿಗೆ ಸಂಪರ್ಕ ಹಾಗೂ ಬೆಳವಣಿಗೆಗೆ ಈ ಬಾರಿಯ ಬಜೆಟ್ ಪೂರಕವಾಗಿದೆ ಎಂದು ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಬಜೆಟ್ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ.
0 comments:
Post a Comment