PLEASE LOGIN TO KANNADANET.COM FOR REGULAR NEWS-UPDATES


  ಜಿಲ್ಲೆಯಲ್ಲಿನ ವಿವಿಧ ವಸತಿ ಶಾಲೆಗಳಿಗೆ ೨೦೧೩-೧೪ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ಜಾತಿ ಪ್ರಮಾಣಪತ್ರ ಇಲ್ಲದಿದ್ದರೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಬಿಸಿಎಂ ಅಧಿಕಾರಿ ಬಿ. ಕಲ್ಲೇಶ್ ಅವರು ತಿಳಿಸಿದ್ದಾರೆ.
  ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ ವಸತಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಒಟ್ಟು ೨೨ ವಿವಿಧ ವಸತಿ ಶಾಲೆಗಳಿಗೆ ೬ನೇ ತರಗತಿಗೆ ೨೦೧೩-೧೪ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆ. ೨೫ ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸಲು ಜಾತಿ, ಆದಾಯ ಪ್ರಮಾಣಪತ್ರ, ಅಂಗವಿಕಲ, ವಿಶೇಷ ವರ್ಗದ ಪ್ರಮಾಣಪತ್ರ ಸಲ್ಲಿಸಲು ಸೂಚನೆ ನೀಡಲಾಗಿತ್ತು.  ಆದರೆ ಜಾತಿ ಪ್ರಮಾಣಪತ್ರ ಪಡೆಯಲು ಸಾಕಷ್ಟು ಸಮಯಾವಕಾಶ ಬೇಕಾಗಿರುವುದರಿಂದ, ಸದ್ಯ ಅರ್ಜಿ ಸಲ್ಲಿಸಬಯಸುವವರು ಜಾತಿ, ಆದಾಯ ಇತರೆ ಮೀಸಲಾತಿ ಪ್ರಮಾಣ ಪತ್ರ ಇಲ್ಲದೆಯೂ ಅರ್ಜಿ ಸಲ್ಲಿಸಬಹುದಾಗಿದೆ.  ಆದರೆ ಮಾರ್ಚ್ ೨೪ ರಂದು ನಡೆಯುವ ಪ್ರವೇಶ ಪರೀಕ್ಷೆಯ ಸಂದರ್ಭದಲ್ಲಿ ಕೊಠಡಿ ಮೇಲ್ವಿಚಾರಕರಿಗೆ ಕಡ್ಡಾಯವಾಗಿ ಮೀಸಲಾತಿ ಪ್ರಮಾಣಪತ್ರಗಳ ನಕಲು ಪ್ರತಿಯನ್ನು ಸಲ್ಲಿಸಬೇಕು.  ಇಲ್ಲದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಪರಿಗಣಿಸದೆ, ಸಾಮಾನ್ಯ ಅಭ್ಯರ್ಥಿ ಎಂದು ಪರಿಗಣಿಸಿ, ಫಲಿತಾಂಶ ಪ್ರಕಟಿಸಲಾಗುವುದು ಎಂದು ಜಿಲ್ಲಾ ಬಿಸಿಎಂ ಅಧಿಕಾರಿ ಬಿ. ಕಲ್ಲೇಶ್  ತಿಳಿಸಿದ್ದಾರೆ.


Advertisement

0 comments:

Post a Comment

 
Top