ಕೊಪ್ಪಳ:ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಮತ್ತು ಸರಕಾರಿ ಕೇಂದ್ರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ವಿಜ್ಞಾನ ದಿನಾಚರಣೆಯ ನಿಮಿತ್ಯ ಶಾಲಾ ವಿಧ್ಯಾರ್ಥಿಗಳಿಗಾಗಿ "ಪಠ್ಯಾಧಾರಿತ ವಿಜ್ಞಾನ ರಸ ಪ್ರಶ್ನೆ" ಕಾರ್ಯಕ್ರಮವನ್ನು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಪೆಬ್ರವರಿ ೨೭ ರಂದು ಜರುಗಲಿದ್ದು,ವಿಜೇತರಾದವರಿಗೆ ಪೆಬ್ರವರಿ ೨೮ರಂದು ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುತ್ತದೆ.ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿಧ್ಯಾರ್ಥಿಗಳು,ಒಬ್ಬ ಶಿಕ್ಷಕರು ಭಾಗವಹಿಸಬಹುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿ.ಪಿ.ಎಸ್.ಶಾಲೆಯ ಮುಖ್ಯೋಪಾಧ್ಯಾಯರಾದ ಭರಮಪ್ಪ ಕಟ್ಟಿಮನಿ ವಹಿಸುವರು.
ಮುಖ್ಯ ಅಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಸವರಾಜಯ್ಯ,ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ,ಜಿಲ್ಲಾಧ್ಯಕ್ಷರಾದ ಚನ್ನಬಸಪ್ಪ ಬೆಲ್ಲದ,ಕೊಪ್ಪಳ ತಾಲೂಕ ಅಧ್ಯಕ್ಷರಾದ ಅಂದಪ್ಪ ಬೋಳರಡ್ಡಿ,ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಶರಣಬಸವನಗೌಡ,ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯರಾದ ಗಂಗಾಧರ ಕಾತರಕಿ,ಐ.ಆರ್.ಡಿ.ಎಸ್.ನ ನಾಗರಾಜ ದೇಸಾಯಿ ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾದ ಸಿಬ್ಬಂದಿ ಭಾಗವಹಿಸುವರು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ. ೯೦೦೮೬೩೮೩೦೦ , ೯೫೩೫೬೩೮೭೮೯ , ೯೭೪೧೮೨೧೧೫೮.
0 comments:
Post a Comment