ಕೊಪ್ಪಳದ ಎಸ್.ಎಫ್.ಎಸ್. ಶಾಲೆಯಲ್ಲಿ ೧ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮರ್ಥ ಜೋಷಿ ತಂದೆ ರವೀಂದ್ರ ಜೋಷಿ ಎಂಬ ಪುಟ್ಟ ಬಾಲಕ ಚಿತ್ರದುರ್ಗದಲ್ಲಿ ನಡೆದ ಕನ್ನಡ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸಿ ಪ್ರಥಮ ರ್‍ಯಾಂಕ್ ಪಡೆದುಕೊಂಡಿದ್ದಾನೆ.
ಚಿತ್ರದುರ್ಗದ ಸಿರಿಗನ್ನಡ ಪ್ರಕಾಶನದಿಂದ ಪ್ರತಿ ವರ್ಷ ಜರುಗುವ ಕನ್ನಡ ಪ್ರತಿಭಾ ಪರೀಕ್ಷೆಯಲ್ಲಿ ಕೊಪ್ಪಳದ ಸಮರ್ಥ ಜೋಷಿ ಭಾಗವಹಿಸಿ ಪ್ರಥಮ ರ್‍ಯಾಂಕ್ ಪಡೆದಿದ್ದು, ರಾಜ್ಯದ ಖ್ಯಾತ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ, ಚಳ್ಳಕೆರೆ ಯರ್ರಿಸ್ವಾಮಿ ಅವರು ಬಾಲಕನಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದ್ದಾರೆ. ಬಾಲಕನ ಸಾಧನೆಗೆ ಶಾಲೆಯ ಮುಖ್ಯಸ್ಥರು, ಶಿಕ್ಷಕ ಬಳಗ ಹಾಗೂ ಬಾಲಕನ ತಂದೆ, ತಾಯಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.
0 comments:
Post a Comment