: ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೊಪ್ಪಳ ನಗರದ ಮುಸ್ಲಿಂ ಶಾದಿ ಮಹಲ್ ಆವರಣದಲ್ಲಿ ಬುಧವಾರದಂದು ಪಿ.ಎಂ.ಇ.ಜಿ.ಪಿ. ಜಿಲ್ಲಾ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ಉತ್ಸವದ ವಸ್ತು ಪ್ರದರ್ಶನದ ಉದ್ಘಾಟನೆಗೆ ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ವಿನಯಕುಮಾರ ಅವರು ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿ.ಪಂ.ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ.ಅಧ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಕೆ.ನಾಗರಾಜು, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಎ.ಆನಂದ, ಕೆ.ವಿ.ಪತ್ತಾರ ಹುಬ್ಬಳ್ಳಿ, ರಂಗಪ್ಪ ಹೂಗಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
0 comments:
Post a Comment