ಕೊಪ್ಪಳ ನಗರಸಭೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಂಗಳೂರು ಇವರ ಸಂಯುಕ್ತ ಆಶ್ರಯದೊಂದಿಗೆ, ಕೊಪ್ಪಳ-ಹಿರೇಸಿಂದೋಗಿ ರಸ್ತೆಯಲ್ಲಿರುವ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕದಲ್ಲಿ ಅಳವಡಿಸಲಾಗಿರುವ ಘನತ್ಯಾಜ್ಯ ಸರಳ ಸಂಸ್ಕರಣ ಯಂತ್ರದ ಉದ್ಘಾಟನೆ ಕಾರ್ಯಕ್ರಮ ಮಾ. ೧೫ ರಂದು ಬೆಳಿಗ್ಗೆ ೧೦-೧೫ ಗಂಟೆಗೆ ಜರುಗಲಿದೆ.
ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ವಾಮನ ಆಚಾರ್ಯ ಅವರು ಯಂತ್ರದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಸಮಾಂಭದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಂಸದ ಶಿವರಾಮಗೌಡ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪೌರಾಡಳಿತ ನಿರ್ದೇಶನಾಲಯದ ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ಎಚ್.ಎಂ.ಶ್ರೀಪ್ರಕಾಶ್ ಅವರು ವಿಶೇಷ ಆಹ್ವಾನಿತರಾಗಿದ್ದು, ಜಿಲ್ಲಾ ಸರ್ಕಾರಿ ಅಭಿಯೋಜಕ ವಿ.ಎಂ. ಭೂಸನೂರಮಠ ಅವರು ಇದೇ ಸಂದರ್ಭದಲ್ಲಿ ತಾಂತ್ರಿಕ ವರದಿಯನ್ನು ನೀಡಲಿದ್ದಾರೆ ಎಂದು ನಗರಸಭೆ ಪೌರಾಯುಕ್ತೆ ಬಿ.ಎಂ. ಅಶ್ವಿನಿ ತಿಳಿಸಿದ್ದಾರೆ.
0 comments:
Post a Comment