PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ : ನಮ್ಮ ನಾಡಿನ ದೇಸಿ ಪರಿಸರವನ್ನು ಅದರ ಮೂಲ ಆಕರಗಳೊಂದಿಗೆ ಸಂಗ್ರಹಿಸಿ, ದಾಖಲಿಸಿ ಸಂರಕ್ಷಿಸುವ ಉದ್ದೇಶದಿಂದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು. 'ಗ್ರಾಮ ಚರಿತ್ರೆ ಕೋಶ' ವನ್ನು ಸಿದ್ದಪಡಿಸುವ ಯೋಜನೆಯನ್ನು ಹಾಕಿಕೊಂಡಿದೆ. ಈ ಕರ್ನಾಟಕ ಗ್ರಾಮ ಚರಿತ್ರೆ ಕೋಶದ ಕೊಪ್ಪಳ ತಾಲೂಕಿನ  ಕ್ಷೇತ್ರ ತಜ್ಞರೆಂದು ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಅಥಶಾಸ್ತ್ರ ಉಪನ್ಯಾಸಕರು ಹಾಗೂ ಜಾನಪದ ಹಾಡುಗಾರರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಯವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಅಂಬಳಿಕೆ ಹಿರಿಯಣ್ಣ ಅವರು ಆದೇಶ ನೀಡಿದ್ದಾರೆ. 

Advertisement

0 comments:

Post a Comment

 
Top