ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಹೊಸಪೇಟೆ ಆಕಾಶವಾಣಿ ಕೇಂದ್ರದವರ ಸಹಕಾರದೊಂದಿಗೆ ಏ. ೦೧ ರಂದು ಮಧ್ಯಾಹ್ನ ೧೨ ಗಂಟೆಗೆ ಹೊಸಪೇಟೆ ಆಕಾಶವಾಣಿ ಕೇಂದ್ರದಿಂದ ನೇರ ಫೋನ್-ಇನ್ ಕಾರ್ಯಕ್ರಮ ಪ್ರಸಾರವಾಗಲಿದೆ.
ಮತದಾರರ ನೋಂದಣಿ ಹಾಗೂ ಮತದಾನ ಚಲಾವಣೆ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ನಿವಾರಿಸಲು ಭಾರತದ ಚುನಾವಣಾ ಆಯೋಗವು ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ಕಾರ್ಯಕ್ರಮ (ಸ್ವೀಪ್) ಜಾರಿಗೆ ತಂದಿದ್ದು, ಈ ಕಾರ್ಯಕ್ರಮದಡಿ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಮತದಾರರ ಹಾಗೂ ಕೇಳುಗರ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ಸ್ವೀಪ್ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್ ಬಿ.ವಿ. ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನೇರ ಫೋನ್-ಇನ್ ಕಾರ್ಯಕ್ರಮವು ಏ. ೦೧ ರಂದು ಮಧ್ಯಾಹ್ನ ೧೨ ಗಂಟೆಯಿಂದ ೦೧ ಗಂಟೆಯವರೆಗೆ ಹೊಸಪೇಟೆ ಆಕಾಶವಾಣಿ ಕೇಂದ್ರದ ಎಫ್.ಎಂ. ಬ್ಯಾಂಡ್ ಕಂಪನಾಂಕ ೧೦೦. ೫ ಮೆಗಾಹರ್ಟ್ಸ್‌ನಲ್ಲಿ ಪ್ರಸಾರವಾಗಲಿದ್ದು, ಕೇಳುಗರು ದೂರವಾಣಿ ಸಂಖ್ಯೆ ೦೮೩೯೪-೨೨೧೧೦೦ ಅಥವಾ ೦೮೩೯೪-೨೨೭೧೦೦ ಕ್ಕೆ ಸಂಪರ್ಕಿಸಿ ಮಾಹಿತಿ ಅಥವಾ ಪ್ರಶ್ನೆಗಳನ್ನು ಕೇಳಬಹುದಾಗಿದೆ .
0 comments:
Post a Comment