PLEASE LOGIN TO KANNADANET.COM FOR REGULAR NEWS-UPDATES


  ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆ ನಿಮಿತ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಸರಳ, ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
  ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಬರುವ ಏ. ೦೫ ರಂದು ಡಾ. ಬಾಬು ಜಗಜೀವನರಾಂ ರವರ ೧೦೬ನೇ ಜನ್ಮ ದಿನಾಚರಣೆ ಹಾಗೂ ಏ. ೧೪ ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ೧೨೨ನೇ ಜನ್ಮ ದಿನಾಚರಣೆಯನ್ನು ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಆಯಾ ದಿನಾಂಕದಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯಾ ಮಹನೀಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪೂಜೆ ಸಲ್ಲಿಸಿ ಸರಳವಾಗಿ ಆಚರಿಸಲಾಗುವುದು.  ಈ ಕಾರ್ಯಕ್ರಮಗಳಿಗೆ ಎಲ್ಲ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Advertisement

0 comments:

Post a Comment

 
Top