: ನಗರ, ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮಾ. ೦೭ ರಂದು ಮತದಾನ ಜರುಗಲಿದ್ದು, ಅಂದು ಭಾವಚಿತ್ರವಿರುವ ಮತದಾರರ ಗುರುತಿನ ಕಾರ್ಡ್ ಹೊಂದಿಲ್ಲದ ಮತದಾರರು ಈ ಕೆಳಗಿನ ೨೧ ದಾಖಲೆಗಳ ಪೈಕಿ ಯಾವುದಾದರು ಒಂದು ದಾಖಲೆ ಹಾಜರು ಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗ ಸೂಚಿಸಿರುವಂತೆ, ಭಾವಚಿತ್ರವಿರುವ ಮತದಾರರ ಗುರುತಿನ ಕಾರ್ಡ್ ಹೊಂದಿಲ್ಲದ ಮತದಾರರು ಈ ಕೆಳಕಂಡ ದಾಖಲೆಗಳ ಪೈಕಿ ಯಾವುದಾದರೊಂದು ದಾಖಲೆಗಳನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ. ಪಾಸ್ ಪೋರ್ಟ್, ಡ್ರೈವಿಂಗ್ ಲೈಸನ್ಸ್ , ಪಾನ್ ಕಾರ್ಡ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಸಾರ್ವಜನಿಕ ವಲಯದ ಬ್ಯಾಂಕ್/ಕಿಸಾನ್ ಮತ್ತು ಅಂಚೇ ಕಛೇರಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ, ಮಾನ್ಯತೆ ಪಡೆದ ನೋಂದಾಯಿತ ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೊಟ್ಟಿರುವ ಗುರುತಿನ ಚೀಟಿಗಳು, ಭಾವಚಿತ್ರವಿರುವ ನೋಂದಾಯಿತ ಡೀಡ್‌ಗಳು/ಪಟ್ಟಾಗಳು ಮುಂತಾದ ಆಸ್ತಿ ದಾಖಲೆಗಳು, ಭಾವಚಿತ್ರವಿರುವ ಪಡಿತರ ಚೀಟಿಗಳು, ಸಕ್ಷಮ ಪ್ರಾಧಿಕಾರ ನೀಡಿರುವ ಎಸ್.ಸಿ./ಎಸ್.ಟಿ./ಓಬಿಸಿ/ ಭಾವಚಿತ್ರವಿರುವ ಪ್ರಮಾಣ ಪತ್ರಗಳು, ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಪಿಂಚಣಿ ಪಾವತಿ ಆದೇಶಗಳು ಅಥವಾ ಮಾಜಿ ಯೋಧರ ಪಿಂಚಣಿ ಪುಸ್ತಕ/ ಪಿಂಚಣಿ ಆದೇಶಗಳಂತಹ ಪಿಂಚಣಿ ದಾಖಲೆಗಳು, ವೃದ್ದಾಪ್ಯ ವೇತನ ಆದೇಶಗಳು, ವಿಧವಾ ವೇತನ ಆದೇಶಗಳು, ಭಾವಚಿತ್ರವಿರುವ ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿಗಳು, ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಶಸ್ತ್ರ ಪರವಾನಿಗೆ, ಅಂಗವಿಕಲರಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿಗಳು, ಮಾಜಿ ಯೋಧರ ಭಾವಚಿತ್ರವಿರುವ ಸಿ.ಎಸ್.ಡಿ. ಕ್ಯಾಂಟೀನ್ ಕಾರ್ಡ್, ಸಂಧ್ಯಾ ಸುರಕ್ಷಾ ಯೋಜನೆಯ ಭಾವಚಿತ್ರವಿರುವ ಗುರುತಿನ ಚೀಟಿ, ಎನ್.ಆರ್.ಇ.ಜಿ. ಯೋಜನೆಯ ಭಾವಚಿತ್ರವಿರುವ ಗುರುತಿನ ಚೀಟಿ, ಭಾವಚಿತ್ರವಿರುವ ಯಶಸ್ವಿನಿ ಕಾರ್ಡ್, ನಗರಸಭೆ/ಪುರಸಭೆ/ಗ್ರಾಮ ಪಂಚಾಯತ್‌ಗಳು ಇತ್ಯಾದಿ ಸ್ಥಳೀಯ ಸಂಸ್ಥೆಗಳು ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಸರಕಾರಿ ಇಲಾಖೆ ನೀಡಿರುವ ಹಿರಿಯ ನಾಗರಿಕರ ಗುರುತಿನ ಚೀಟಿಗಳು, ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ನೀಡಿರುವ ಕುಟುಂಬದ ಸದಸ್ಯರ ಹೆಸರು ಮತ್ತು ವಯಸ್ಸು ಹಾಗೂ ಕುಟುಂಬದ ಯಜಮಾನನೊಂದಿಗೆ ಹೊಂದಿರುವ ಸದಸ್ಯರ ಸಂಬಂಧ ಒಳಗೊಂಡ ಭಾವಚಿತ್ರವಿರುವ ತಾತ್ಕಾಲಿಕ/ಮೂಲ ಪಡಿತರ ಚೀಟಿ, ಆರೋಗ್ಯ ವಿಮೆ ಯೋಜನೆಯಡಿಯಲ್ಲಿ ನೀಡಲಾದ ಭಾವಚಿತ್ರವಿರುವ ಸ್ಮಾರ್ಟ್ ಕಾರ್ಡ್ (ಕಾರ್ಮಿಕ ಮಂತ್ರಾಲಯ ಯೋಜನೆ) ಇವುಗಳ ಪೈಕಿ ಯಾವುದಾದರೂ ಒಂದು ದಾಖಲೆ ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ತುಳಸಿ ಮದ್ದಿನೇನಿ ತಿಳಿಸಿದ್ದಾರೆ.
0 comments:
Post a Comment