ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಅಂತಹ ಅಭ್ಯರ್ಥಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸೂಚನೆ ನೀಡಿದ್ದಾರೆ.
ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುವುದು ಅಪರಾಧವಾಗಿದ್ದು, ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಈಗಾಗಲೆ ಚುನಾವಣೆಗಾಗಿ ನೇಮಿಸಲಾಗಿರುವ ಎಂ.ಸಿ.ಸಿ. ತಂಡದ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ತಿಳಿಸಿದ್ದಾರೆ.
0 comments:
Post a Comment