PLEASE LOGIN TO KANNADANET.COM FOR REGULAR NEWS-UPDATES


 ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದಲ್ಲಿ ರಾಜ್ಯ ವಿಜ್ಞಾನ ಪರಿಷತ್ತು, ರಾಜ್ಯದ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರಿಗೆ, ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು, ವರದಿಗಾರರಿಗೆ ಜನಪ್ರಿಯ ವಿಜ್ಞಾನ ಬರವಣಿಗೆಯ ತರಬೇತಿ ಶಿಬಿರವನ್ನು ಧಾರವಾಡ ಜಿಲ್ಲೆಯ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಏಪ್ರಿಲ್ ಒಂದನೇ ಅಥವಾ ಎರಡನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿ ಇರುವ ಗ್ರಾಮೀಣ ವಿಭಾಗದ ವಿಜ್ಞಾನ ಶಿಕ್ಷಕರು, ಯುವ ಪತ್ರಿಕಾ ವರದಿಗಾರರು, ಚಿತ್ರ ನಿರೂಪಕರು, ರೇಡಿಯೋ ಭಾಷಣಕಾರರು ಮತ್ತಿತರ ಆಸಕ್ತರು ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ಬರಹಗಾರರಿಂದ, ಸಂಪಾದಕರಿಂದ, ಸಂವಹನಕಾರರಿಂದ ಶಿಬಿರಾರ್ಥಿಗಳಿಗೆ ವಿಜ್ಞಾನ ಬರವಣಿಗೆಯ ಕುರಿತು ವಿವಿಧ ಕೌಶಲ್ಯ, ಆಕರಗಳು, ಶಬ್ದ-ಬಳಕೆ, ಅನುವಾದ, ವಿಜ್ಞಾನ ಪತ್ರಿಕೋದ್ಯಮ-ಸಂವಹನ ವಿಧಾನಗಳು ಮುಂತಾದ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುವುದು. ಶಿಬಿರಾರ್ಥಿಗಳಾಗಿ ಭಾಗವಹಿಸಲಿಚ್ಚಿಸುವವರು ವಿಜ್ಞಾನ ಸಂವಹನದಲ್ಲಿ ವಿಶೇಷ ಆಸಕ್ತಿ ಹೊಂದಿರಬೇಕು, ಶಿಬಿರದಲ್ಲಿ ಭಾಗವಹಿಸಲು ವ್ಯಕ್ತಿಗತ ವಿವರಗಳು (ಬಯೋಡಾಟಾ), ಪಾಸ್‌ಪೋರ್ಟ ಅಳತೆಯ ಭಾವಚಿತ್ರ ಹಾಗೂ ಒಂದು ಸ್ವರಚಿತ ಲೇಖನವನ್ನು ಅರ್ಜಿಯ ಜೊತೆಯಲ್ಲಿ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನಭವನ, ನಂ.೨೪/೨, ೨೧ನೇ ಮುಖ್ಯರಸ್ತೆ, ಬನಶಂಕರಿ ೨ನೇ ಹಂತ, ಬೆಂಗಳೂರು - ೫೬೦೦೭೦ ಈ ವಿಳಾಸಕ್ಕೆ ಮಾ.೨೫ ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರಾಜ್ಯ ಸಂಯೋಜಕರಾದ ಪ್ರೊ. ಎಸ್.ವಿ.ಸಂಕನೂರ, ಮೊ.೯೪೪೮೩೦೧೯೮೩ ಇವರನ್ನು ಸಂಪರ್ಕಿಸಬಹುದಾಗಿದೆ.

Advertisement

0 comments:

Post a Comment

 
Top