ರಾಜ್ಯ ಚುನಾವಣೆ ಆಯೋಗದಿಂದ ಮಾ.೦೭ ರಂದು ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಯ ಮತದಾನ ಜರುಗಲಿದ್ದು, ಮತದಾನ ಹಿಂದಿನ ದಿನವಾದ ಮಾ.೦೬ ರಂದು ಬೆಳಿಗ್ಗೆ ೭.೦೦ ಗಂಟೆಯಿಂದ ಮಾ.೦೭ ರ ಮಧ್ಯರಾತ್ರಿಯವರೆಗೆ, ಏಣಿಕೆ ದಿನವಾದ ಮಾ.೧೧ ರಂದು ಬೆಳಿಗ್ಗೆ ೬.೦೦ ಗಂಟೆಯಿಂದ ಸಾಯಂಕಾಲ ೮.೦೦ ಗಂಟೆಯವರೆಗೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಗಡಿಯ ಪ್ರದೇಶದಿಂದ ೩ ಕಿ.ಮೀ. ಅಂತರದಲ್ಲಿ ಮಧ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶ ಹೊರಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ಇರುವ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ, ಮಧ್ಯಪಾನ, ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಕೊಪ್ಪಳ ಜಿಲ್ಲೆಯ ನಗರದ ಪ್ರದೇಶದ ೩ ಕಿ.ಮೀ. ವ್ಯಾಪ್ತಿಯೊಳಗೆ ಮಾತ್ರ ಮಾ.೦೬ ಬೆಳಿಗ್ಗೆ ೭.೦೦ ಗಂಟೆಯಿಂದ ಮಾ.೦೭ ರ ಮಧ್ಯರಾತ್ರಿಯವರೆಗೆ, ಏಣಿಕೆ ದಿನವಾದ ಮಾ.೧೧ ರಂದು ಬೆಳಿಗ್ಗೆ ೬.೦೦ ಗಂಟೆಯಿಂದ ಸಾಯಂಕಾಲ ೮.೦೦ ಗಂಟೆಯವರೆಗೆ ಎಲ್ಲಾ ವೈನ್‌ಶಾಪ್, ಬಾರಗಳು, ಸಗಟು ಮತ್ತು ಚಿಲ್ಲರೆ ಮಧ್ಯ ಮಾರಾಟವನ್ನು ನಿಷೇಧಿಸಿದೆ. ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ಮುಖಂಡತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆತರುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಆದೇಶದಲ್ಲಿ ತಿಳಿಸಿದ್ದಾರೆ.
0 comments:
Post a Comment