ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳು ಮಾ.೧೩ ರಿಂದ ೨೮ ರವರೆಗೆ ಕೊಪ್ಪಳ ಜಿಲ್ಲೆಯ ೧೧ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಸುಸೂತ್ರವಾಗಿ ನಡೆಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಮಾ.೦೫ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಹಿಸುವರು. ಕೊಪ್ಪಳ, ಕುಷ್ಟಗಿ, ಗಂಗಾವತಿ ಹಾಗೂ ಯಲಬುರ್ಗಾ ತಾಲೂಕಿನ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಖಜಾನಾಧಿಕಾರಿಗಳು-ಉಪಖಜಾನಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ವಿಶೇಷ ಪ್ರಶ್ನೆ ಪತ್ರಿಕೆ ಪಾಲಕರು ಸಭೆಗೆ ಹಾಜರಾಗಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
0 comments:
Post a Comment