PLEASE LOGIN TO KANNADANET.COM FOR REGULAR NEWS-UPDATES


  ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ಹೊರಡಿಸಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು/ಅಭ್ಯರ್ಥಿಗಳು ಭರಿಸುವ ಚುನಾವಣಾ ವೆಚ್ಚಗಳ ಮೇಲೆ ನಿಗಾವಹಿಸಲು ಜಿಲ್ಲಾ ಮಟ್ಟದಲ್ಲಿ (Expenditure Monitory Cell)  ನ್ನು ಸ್ಥಾಪಿಸಲಾಗಿದ್ದು, (Expenditure Monitory Cell)  ಈ ತಂಡಕ್ಕೆ ವಿವಿಧ ಅಧಿಕಾರಿಗಳನ್ನು ಕಾರ್ಯನಿರ್ವಹಿಸಲು ನೇಮಕ ಮಾಡಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ತುಳಸಿ ಮದ್ದಿನೇನಿ ಅವರು ಆದೇಶ ಹೊರಡಿಸಿದ್ದಾರೆ.
(Expenditure Monitory Cell) ಅಧಿಕಾರಿಗಳು : ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಮುಖ್ಯ ಲೆಕ್ಕಾಧಿಕಾರಿಗಳು ಜಿ.ಪಂ, ಸಹಾಯಕ ವಾಣಿಜ್ಯ ತೆರಿಗೆ ಅಧಿಕಾರಿಗಳು, ಕೊಪ್ಪಳ ಹಾಗೂ ಸ್ಥಳೀಯ ಲೆಕ್ಕ ಪರಿಶೋಧಕರು ಕೊಪ್ಪಳ ಇವರನ್ನು ನೇಮಿಸಲಾಗಿದೆ. (Expenditure Monitory Cell) ಂಡವು ಕೊಪ್ಪಳ ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಮಾಡುವ ಚುನಾವಣೆ ವೆಚ್ಚಗಳನ್ನು ವೀಕ್ಷಿಸಲು, ತಪಾಸಣೆ ಮಾಡಲು ಮತ್ತು ಅವರು ನಿರ್ವಹಿಸಿರುವ ವೆಚ್ಚಗಳ ರಜಿಸ್ಟರ್‌ಗಳನ್ನು ಪರಿಶೀಲಿಸುವ ಅಧಿಕಾರವನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top