PLEASE LOGIN TO KANNADANET.COM FOR REGULAR NEWS-UPDATES

 ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೨೨ನೇ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಭಕ್ತಿ ನಮನ ಸಲ್ಲಿಸಿದರು.

ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಡಾ. ಅಂಬೇಡ್ಕರ್ ಅವರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ. ಉಪಕಾರ್ಯದರ್ಶಿ ರವಿ ಬಸರಿಹಳ್ಳಿ, ಸಹಾಯಕ ಆಯುಕ್ತ ಮಂಜುನಾಥ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜೂರ್ ಹುಸೇನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಭಕ್ತಿ ನಮನ ಸಲ್ಲಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ವಾರ್ತಾ ಇಲಾಖೆಯಿಂದ ಪ್ರಕಟಿಸಲಾಗಿರುವ ವಿಶೇಷ ಜನಪದ ಪುಸ್ತಿಕೆಯನ್ನು ಈ ಸಂದರ್ಭದಲ್ಲಿ ಎಲ್ಲ ಅಧಿಕಾರಿಗಳು, ಗಣ್ಯರಿಗೆ ವಿತರಿಸಲಾಯಿತು.

Advertisement

0 comments:

Post a Comment

 
Top