ಕೊಪ್ಪಳ, ಏ.೨೫: ಕ್ಷೇತ್ರದ ಸಂಪೂರ್ಣ ಚಿತ್ರಣವನ್ನೇ ಬದಲಾವಣೆ ಮಾಡುವಂತ ವ್ಯಕ್ತಿತ್ವವುಳ್ಳ ವ್ಯಕ್ತಿ ಅದು ಪ್ರದೀಪಗೌಡ ವಿ. ಮಾಲಿ ಪಾಟೀಲ್‌ರಿಂದ ಮಾತ್ರ ಸಾಧ್ಯವೆಂದು ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ವಿ. ಪಾಟೀಲ್ ಹೇಳಿದರು.
ಅವರು ಗುರುವಾರ ತಾಲೂಕಿನ ಬಿಸರಳ್ಳ್ಳಿ ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಬಿಜೆಪಿಯಲ್ಲಿನ ಭ್ರಷ್ಟಾಚಾರ ಮತ್ತು ವ್ಯಕ್ತಿ ಪ್ರತಿಷ್ಟೆ ಬೇಸತ್ತು ಬಿಜೆಪಿ ಪಕ್ಷ ತೊರೆದಿದ್ದೇನೆ. ಕಾಂಗ್ರೆಸ್ ಮತ್ತು ಬಿಜೆಪಿ ಆಡಳಿತವನ್ನು ಕ್ಷೇತ್ರದ ಜನತೆ ಕಂಡಿದ್ದು ಇನ್ನಾದರೂ ಹೊಸಮುಖ, ಹೊಸತನದ ಕ್ಷೇತ್ರದ ಬಗ್ಗೆ ಕಳಕಳಿಯುಳ್ಳವರಿಗೆ ಕವಲೂರು ಗೌಡ್ರರಿಗೆ ನಿಮ್ಮ ಮತ ಮುಕ್ತವಾಗಿರಲಿ ಎಂದರು. ನಮ್ಮನ್ನು ಓಟ್ ಬ್ಯಾಂಕ್‌ನ್ನಾಗಿಸಿಕೊಂಡ ಕಾಂಗ್ರೆಸ್‌ಗೆ ಮತ್ತು ಬಣ್ಣದ ಮಾತಿನ ಬಿಜೆಪಿ ಪಕ್ಷಕ್ಕೆ ಅಧಿಕಾರ ನೀಡಿದ ಸಮಾಜ ಬಾಂಧವರು ಈ ಬಾರಿ ಜೆಡಿಎಸ್ ಸರಳ ಸಜ್ಜನಿಕೆಯ ಕೊಡುಗೈದಾನಿ ಪ್ರದೀಪಗೌಡ್ರಗೆ ನಮ್ಮ ಸಮಾಜದ ಮತಗಳು ಮೀಸಲಾಗಿರಲಿ ಎಂದು ಎಸ್‌ಸಿ, ಎಸ್‌ಟಿ ಘಟಕದ ಮುಖಂಡ ಗಾಳೆಪ್ಪ ಕಡೆಮನಿ ಬೇಳೂರು ಹರಿಜನ ಕೇರಿಯಲ್ಲಿ ಮನವಿ ಮಾಡಿದರು.
ಇದೇ ವೇಳೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ಮಾತನಾಡಿ, ಈ ಭಾಗದ ಜನರ ಅಭಿಮಾನ ಮತದಾನವಾಗಿ ಪರಿವರ್ತನೆಗೊಳ್ಳಲಿ ಮತದಾನದ ಮಹತ್ವ ಅರಿತು ಮತದಾನ ಮಾಡಿ ಸುಳ್ಳು ಭರವಸೆ, ಆಮಿಷಗಳಿಗೆ ಓಳಗಾಗಬೇಡಿ ಎಂದು ಕಿವಿ ಮಾತು ಹೇಳಿದರು.
ಪ್ರಚಾರ: ಹೀರೆಸಿಂದೋಗಿ ಜಿ.ಪಂ. ವ್ಯಾಪ್ತಿಯ ಕಾತರಕಿ, ಗುಡ್ಲಾನೂರು, ಆದರಮಗ್ಗಿ ಮತ್ತು ಮೈನಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ, ಮಾಜಿ ಜಿ.ಪಂ. ಸದಸ್ಯ ಮೋತಿಲಾಲ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷರುಗಳಾದ ಎಂ.ವಿ. ಪಾಟೀಲ್, ನಿಲಕಂಠಯ್ಯ ಹಿರೇಮ ಠ, ನಗರಸಭೆ ಮಾಜಿ ಸದಸ್ಯ ಈರಣ್ಣ ಹಂಚಿನಾಳ ಹಾಗೂ ಹಿರಿಯರಾದ ಹಲಗೇರಿ ಬಸವರಾಜಪ್ಪ, ತಾಲ್ಲೂಕಾಧ್ಯಕ್ಷ ಅಂದಪ್ಪ ಮರೇಬಾಳ, ಕಾರ್ಯದರ್ಶಿ ಶೇಖಪ್ಪ ಲಕ್ಷಾಣಿ, ಎಸ್. ಟಿ ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್.ರಮೇಶ ವಣಬಳ್ಳಾರಿ, ಪಕ್ಷದ ಮುಖಂಡರಾದ ವಿರೇಶ್‌ಮಹಾಂತಯ್ಯನಮಠ್, ರಾಜು ಹಲಗೇರಿ, ಕೋಟ್ರಪ್ಪ ಕೋರ್ಲಳ್ಳಿ, ಎಂ.ಡಿ.ಹುಸೇನ ಮಾಸ್ಟರ್, ನಗರ ಸಭೆ ಸದಸ್ಯರಾದ ಚನ್ನಪ್ಪ ಕೋಟ್ಯಾಳ್, ಖಾಜಾವಲಿ ಬನ್ನಿಕೊಪ್ಪ, ನಗರ ಯುವ ಘಟಕದ ಅಧ್ಯಕ್ಷ ಸೈಯದ್ ಎಂ.ಹುಸೇನಿ, ಟಿ.ಟಿ. ಪಾಟೀಲ್, ಸಿದ್ದಾರಡ್ಡಿ ಡಂಬ್ರಳ್ಳಿ, ಇಸೂಫ್‌ಖಾನ್, ಹನುಮಂತಪ್ಪ ಹೀರೆಸಿಂದೋಗಿ, ರಮೇಶ ಹದ್ಲಿ, ಶಂಕರ ಗೆ ಜ್ಜಿ, ದೇವೆಂದ್ರಪ್ಪ, ಭಾಗ್ಯನಗರದ ಮಂಜುನಾಥ ಶ್ಯಾವಿ, ಮಂಜುನಾಥ್ ಗಡ್ಡದ್, ವೆಂಕಟೇಶ ಬೆಲ್ಲದ್, ಅಮರೇಶ ಮುರುಳಿ, ವಿಜಯಕುಮಾರ ಬಿಸರಳ್ಳಿ, ಪ್ರಭು ಬಬ್ಲಿ ಸೇರಿದಂತೆ ಪಕ್ಷದ ಇತರ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
0 comments:
Post a Comment