PLEASE LOGIN TO KANNADANET.COM FOR REGULAR NEWS-UPDATES


 ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದಲ್ಲದೆ, ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಸೆಕ್ಟರ್ ಅಧಿಕಾರಿಯಾಗಿ ನೇಮಕಗೊಂಡಿದ್ದ ಗಂಗಾವತಿ ತಾಲೂಕು ವಡ್ಡರಹಟ್ಟಿ ಕ್ಯಾಂಪ್‌ನ ಕಾಲುವೆ ವಿಭಾಗದ ಎಇಇ ಎಲ್.ಕೆ. ಮಹೇಶ್ ಅವರನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಅಮಾನತುಗೊಳಿಸಿದ್ದಾರೆ.
  ಗಂಗಾವತಿ ವಿಧಾನಸಭಾ ಕ್ಷೇತ್ರದ ೯ನೇ ಸೆಕ್ಟರ್ ಅಧಿಕಾರಿಯನ್ನಾಗಿ ವಡ್ಡರಹಟ್ಟಿ ಕ್ಯಾಂಪ್‌ನ ನಂ. ೦೧ ಕಾಲುವೆ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಲ್.ಕೆ. ಮಹೇಶ್ ಅವರನ್ನು ನೇಮಕ ಮಾಡಲಾಗಿತ್ತು.  ಆದರೆ ಇವರು ಮಂಗಳವಾರದಂದು ವಿದ್ಯುನ್ಮಾನ ಮತಯಂತ್ರಗಳಿಗೆ ಅಭ್ಯರ್ಥಿಗಳ ಮತಪತ್ರ ಜೋಡಣಾ ಕಾರ್ಯಕ್ಕೆ ಮದ್ಯಪಾನ ಮಾಡಿ ಹಾಜರಾಗಿದ್ದಲ್ಲದೆ, ಚುನಾವಣಾ ಕರ್ತವ್ಯದಲ್ಲಿ ಲೋಪವೆಸಗಿ, ಚುನಾವಣಾ ಕರ್ತವ್ಯಕ್ಕೆ ತೊಂದರೆ ಉಂಟು ಮಾಡಿರುವುದರಿಂದ, ಎಲ್.ಕೆ. ಮಹೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Advertisement

 
Top