PLEASE LOGIN TO KANNADANET.COM FOR REGULAR NEWS-UPDATES


  ಜಿಲ್ಲೆಯಲ್ಲಿ ಮೇ.೦೫ ರಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಮತ್ತು ಮೇ.೦೮ ರಂದು ಮತ ಏಣಿಕೆ ಇರುವುದರಿಂದ ಈ ದಿನಗಳಂದು ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಮಧ್ಯಪಾನ, ಮಧ್ಯ ಮಾರಾಟ ನಿಷೇಧಿಸಿ ಕರ್ನಾಟಕ ಅಬಕಾರಿ ಕಾಯ್ದೆಯಡಿ ೧೯೬೫ ರ ಕಲಂ ೨೧ ರ ಪ್ರಕಾರ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯಾದ್ಯಂತ ಮೇ.೦೩ ರ ಸಾಯಂಕಾಲ ೫.೦೦ ಗಂಟೆಯಿಂದ ಮೇ.೦೬ ರ ಬೆಳಿಗ್ಗೆ ೬.೦೦ ಗಂಟೆಯವರೆಗೆ ಮತ್ತು ಮೇ ೦೮ ರ ಬೆಳಿಗ್ಗೆ ೬.೦೦ ಗಂಟೆಯಿಂದ ಮೇ ೦೯ ರ ಬೆಳಿಗ್ಗೆ ೬.೦೦ ಗಂಟೆಯವರೆಗೆ ಎಲ್ಲಾ ವೈನ್‌ಶಾಪ್, ಬಾರಗಳು, ಸಗಟು ಮತ್ತು ಚಿಲ್ಲರೆ ಮಧ್ಯ ಮಾರಾಟ ನಿಷೇಧಿಸಲಾಗಿದೆ.  ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ಮುಖಂಡತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top