PLEASE LOGIN TO KANNADANET.COM FOR REGULAR NEWS-UPDATES



ಕೊಪ್ಪಳ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್‌ನ್ನು ಬೆಂಬಲಿಸುವಂತೆ ಕೊಪ್ಪ

ಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳರವರು ಮತದಾರರಲ್ಲಿ ಮನವಿ ಮಾಡಿದರು.
ಅವರು ಸೋಮವಾರ ನಗರದ ೧೯ನೇ ವಾರ್ಡಿನ ಹಟಗಾರ ಪೇಟೆಯ ಹಿರಿಯ ಮುಖಂಡ ರಹೆಮತ್ ಹುಸೇನಿರವರ ನಿವಾಸದಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಹಿಂದಿನ ಬಿಜೆಪಿ ಹಾಗೂ ಜೆಡಿಎಸ್ ಸರಕಾರಗಳ ದುರಾಡಳಿತದಿಂದ ರಾಜ್ಯದ ಜನತೆ ಭ್ರಮನಿರಸಗೊಂಡಿದ್ದು, ಇದೀಗ ಎದುರಾಗಿರುವ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳಿಗೆ ತಕ್ಕ ಪಾಠ ಕಲಿಸುವ ಅವಕಾಶ ಮತದಾರರಿಗೆ ಒದಗಿಬಂದಿದೆ.
ಈ ಹಿನ್ನೆಲೆಯಲ್ಲಿ ಮತದಾರರು ಜಾಗೃತರಾಗಿ ಜನಪರ ಕಾಂಗ್ರೆಸ್ ಪಕ್ಷಕ್ಕೆ ಮತಹಾಕುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವನ್ನು ಅಸ್ತಿತ್ವಕ್ಕೆ ತರುವುದರೊಂದಿಗೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ತಮ್ಮನ್ನು ಬಹುಮತದಿಂದ ಚುನಾಯಿಸಬೇಕೆಂದು ಅವರು ಮನವಿ ಮಾಡಿದರು.
ಸೇರ್ಪಡೆ: ಇದಕ್ಕೂ ಮುನ್ನ ಬಿಜೆಪಿಯ ಹಟಗಾರ ಪೇಟೆಯ ಹಿರಿಯ ಮುಖಂಡ ರಹೆಮತ್ ಹುಸೇನಿರವರು ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಇವರ ಜೊತೆಯಲ್ಲಿಯೇ ಬಿಜೆಪಿ ಹಾಗೂ ಜೆಡಿಎಸ್‌ನ ಅನೇಕ ಕಾರ್ಯಕರ್ತರು ಹಾಗೂ ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ದೇಸಾಯಿ, ಅಮ್ಜದ್ ಪಟೇಲ್, ಮುತ್ತು ಕುಷ್ಟಗಿ, ಮೌಲಾ ಜಮೇದಾರ, ನಾಗರಾಜ ಬಳ್ಳಾರಿ, ಗವಿಸ್ವಾಮಿ, ಯಮನೂರ ನಾಯಕ, ಜಾಕೀರ ಹುಸೇನ್ ಕಿಲ್ಲೆದಾರ, ಶಿವಾನಂದ ಹೊದ್ಲೂರ ಮತ್ತಿತರರು ಉಪಸ್ಥಿತರಿದ್ದರು.

ಕೊಪ್ಪಳ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳರಿಂದ ಬಿರುಸಿನ ಪ್ರಚಾರ
ಕೊಪ್ಪಳ. ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಸೋಮವಾರ ಕೊಪ್ಪಳ ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಬಿರುಸಿನ ಪ್ರಚಾರ ನಡೆಸಿದರು.
ಅವರು ಕೊಪ್ಪಳ ನಗರದ ೧೯, ೧೮ನೇ ವಾರ್ಡಿನಲ್ಲಿ  ಬಿರುಸಿನ ಪ್ರಚಾರ ಕೈಗೊಂಡ ರಾಘವೇಂದ್ರ ಹಿಟ್ನಾಳ, ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.
ಇದೇ ಸಂದರ್ಭದಲ್ಲಿ ನಗರದ ೧೮ನೇ ವಾರ್ಡಿನ ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಚೋಟು ಹುಸೇನಿ ಹಾಗೂ ಆಜಾಂ ಹುಸೇನಿ, ಶಬ್ಬೀರ ಮಾಳೆಕೊಪ್ಪ, ಗೌಸ್ ಗೂದಿ ಇನ್ನೂ ಅನೇಕರು ಜೆಡಿಎಸ್ ಹಾಗೂ ಬಿಎಸ್‌ಆರ್ ಕಾಂಗ್ರೆಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ, ಮುಖಂಡರಾದ ಸುರೇಶ ದೇಸಾಯಿ, ಅಮ್ಜದ್ ಪಟೇಲ್ ಮತ್ತಿತರರು ಉಪಸ್ಥಿತರಿದ್ದರು. 

Advertisement

0 comments:

Post a Comment

 
Top