PLEASE LOGIN TO KANNADANET.COM FOR REGULAR NEWS-UPDATES

 : ಚುನಾವಣೆ ಸಂದರ್ಭದಲ್ಲಿ ಸಂಭವಿಸಬಹುದಾದ ಯಾವುದೇ ಅಕ್ರಮಗಳನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯಬೇಡಿ ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಫ್ಲೈಯಿಂಗ್ ಸ್ಕ್ವಾಡ್ (ವಿಚಕ್ಷಣ ದಳ)ದ ಮುಖ್ಯಸ್ಥರಿಗೆ ಸೂಚನೆ ನೀಡಿದರು.
     ಚುನಾವಣೆ ನಿರ್ವಹಣೆ ಕುರಿತಂತೆ ಸೆಕ್ಟರ್ ಅಧಿಕಾರಿಗಳು, ವಿಡಿಯೋ ವಿಜಿಲೆನ್ಸ್, ಫ್ಲೈಯಿಂಗ್ ಸ್ಕ್ವಾಡ್ ತಂಡಗಳಿಗೆ ತರಬೇತಿ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಕಾರ್ಯಕರ್ತರು ಹಣ, ಉಡುಗೊರೆ, ಸೀರೆ, ಬಂಗಾರದ ಒಡವೆ ಸೇರಿದಂತೆ ಹಲವು ಸಾಮಗ್ರಿಗಳ ಆಮಿಷವೊಡ್ಡಿ, ಹಂಚುವ ಸಾಧ್ಯತೆಗಳು ಇರುವುದರಿಂದ, ಸಂಭವನೀಯ ಅಕ್ರಮಗಳನ್ನು ತಡೆಗಟ್ಟಲು ಫ್ಲೈಯಿಂಗ್ ಸ್ಕ್ವಾಡ್ ತಂಡದ ಮುಖ್ಯಸ್ಥರಿಗೆ ಚುನಾವಣಾ ಆಯೋಗ ಎಕ್ಸಿಕ್ಯುಟೀವ್ ಮ್ಯಾಜಿಸ್ಟ್ರೇಟ್ ಎಂಬುದಾಗಿ ವಿಶೇಷ ಅಧಿಕಾರವನ್ನು ನೀಡಿದೆ.  ಈ ತಂಡದ ಮುಖ್ಯಸ್ಥರು ಯಾವುದೇ ಸಂದರ್ಭದಲ್ಲಿ ಯಾವುದೇ ವಾಹನ, ಮನೆ, ಕಟ್ಟಡ, ಇತ್ಯಾದಿಗಳ ಪರಿಶೀಲನೆ ಹಾಗೂ ಕ್ರಮಕ್ಕೆ ಮುಕ್ತ ಅಧಿಕಾರ ನೀಡಿದೆ.  ಯಾವುದೇ ಅಕ್ರಮ ಕಂಡುಬಂದಲ್ಲಿ, ಯಾವುದೇ ವ್ಯಕ್ತಿಯನ್ನು ಬಂಧಿಸಲು ಇವರಿಗೆ ಅವಕಾಶ ನೀಡಿದೆ.  ಫ್ಲೈಯಿಂಗ್ ಸ್ಕ್ವಾಡ್ ತಂಡದಲ್ಲಿ ಪೊಲೀಸ್, ವಿಡಿಯೋ ರೆಕಾರ್ಡಿಂಗ್, ಹಾಗೂ ಅಗತ್ಯ ಸಿಬ್ಬಂದಿಯನ್ನು ಒದಗಿಸಲಾಗಿದೆ.  ಈ ನಿಟ್ಟಿನಲ್ಲಿ ತಂಡ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ತೀವ್ರ ನಿಗಾ ವಹಿಸಬೇಕು ಎಂದರು.
     ಪ್ರತಿ ೮-೧೦ ಮತಗಟ್ಟೆಗಳಿಗೆ ಒಬ್ಬರು ಸೆಕ್ಟರ್ ಅಧಿಕಾರಿಗಳನ್ನು ನೀಡಿದ್ದು, ಇವರೂ ಸಹ ವಿಡಿಯೋ ಚಿತ್ರೀಕರಣ ವ್ಯವಸ್ಥೆಯನ್ನು ಹೊಂದಿದ್ದು, ಯಾವುದೇ ರಾಜಕೀಯ ಸಭೆ, ಸಮಾರಂಭಗಳ ಬಗ್ಗೆ ತೀವ್ರ ನಿಗಾ ವಹಿಸಿ, ಅಕ್ರಮ ಚಟುವಟಿಕೆಗಳ ಬಗ್ಗೆ ಚಿತ್ರೀಕರಣ ಮಾಡಿಕೊಳ್ಳಬೇಕು,  ಅನುಮತಿಗಿಂತ ಹೆಚ್ಚಿನ ವಾಹನ, ಸಾಮಗ್ರಿ ಇತ್ಯಾದಿ ಬಳಕೆಯಾಗಿದ್ದಲ್ಲಿ, ಅಂತಹ ಎಲ್ಲ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಹೇಳಿದರು.
     ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ, ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ತಹಸಿಲ್ದಾರರು, ಫ್ಲೈಯಿಂಗ್ ಸ್ಕ್ವಾಡ್ ತಂಡಗಳ ಮುಖ್ಯಸ್ಥರು, ಸೆಕ್ಟರ್ ಅಧಿಕಾರಿಗಳು, ವಿಡಿಯೋ ವಿಜಿಲೆನ್ಸ್, ವಿಡಿಯೋ ವೀಕ್ಷಣ ತಂಡಗಳ ಮುಖ್ಯಸ್ಥರು ಭಾಗವಹಿಸಿದ್ದರು.

Advertisement

0 comments:

Post a Comment

 
Top