PLEASE LOGIN TO KANNADANET.COM FOR REGULAR NEWS-UPDATES


  ಜಿಲ್ಲೆಯಲ್ಲಿ ಮಕ್ಕಳನ್ನು ಚುನಾವಣಾ ಪ್ರಚಾರಗಳಲ್ಲಿ ಮೆರವಣಿಗೆ, ಕರಪತ್ರ ಹಂಚಲು ಹಾಗೂ ಭಿತ್ತಿ ಪತ್ರ ಅಂಟಿಸಲು ಮುಂತಾದ ಕೆಲಸಗಳಿಗೆ ಮಕ್ಕಳನ್ನು ಬಳಸಿದರೆ ಹಾಗೂ ಯಾವುದೇ ರಾಜಕೀಯ ಪ್ರಚಾರದ ಉದ್ದೇಶಗಳಿಗಾಗಿ ಮಕ್ಕಳನ್ನು ಬಳಸುವುದು ಕಂಡು ಬಂದಲ್ಲಿ, ಮಕ್ಕಳನ್ನು ರಕ್ಷಿಸಿ ಅಂತಹ 
ಅಭ್ಯರ್ಥಿ/ವ್ಯಕ್ತಿ  ಹಾಗೂ ಪಕ್ಷಗಳ ಮೇಲೆ ಚುನಾವಣಾ ನೀತಿ ಸಂಹಿತೆಯಡಿ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಅಥವಾ ವ್ಯಕ್ತಿಗಳು ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳದಿರುವಂತೆ ಸೂಚಿಸಿದ್ದು, ಒಂದು ವೇಳೆ ಬಳಸಿದ್ದು ಕಂಡು ಬಂದಲ್ಲಿ ಅಂತಹ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಅಥವಾ ವ್ಯಕ್ತಿಗಳ ವಿರುದ್ದ ಚುನಾವಣಾ ನೀತಿ ಸಂಹಿತೆಯಡಿಯಲ್ಲಿ ಪ್ರಕರಣವನ್ನು ದಾಖಲಾಗುವುದು. ಮಕ್ಕಳನ್ನು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಅಥವಾ ವ್ಯಕ್ತಿಗಳು ಬಳಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ೧೦೯೮, ಮೊ.೯೪೪೮೪೭೬೯೬೫, ಮೊ.೯೯೦೨೫೪೦೫೪೮ ಅಥವಾ ೦೮೫೩೯-೨೨೨೭೦೨ ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ತಿಳಿಸಿದ್ದಾರೆ.

Advertisement

0 comments:

Post a Comment

 
Top