: ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಯೂನಿಸೆಫ ಮಕ್ಕಳ ರಕ್ಷಣಾ ಯೋಜನೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶ ವಿಶ್ಲೇಷಣೆ ಹಾಗೂ ೨೦೧೩-೧೪ನೇ ಸಾಲಿನ ಫಲಿತಾಂಶ ಉತ್ತಮ ಪಡಿಸಲು ಕ್ರಿಯಾ ಯೋಜನೆ ತಯಾರಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಾಗಾರದ ಉದ್ಘಾಟನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್.ವೀರಣ್ಣ ಅವರು ನೆರವೇರಿಸಿ ಮಾತನಾಡಿ, ಕೊಪ್ಪಳ ಜಿಲ್ಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ೧೬ನೇ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡಲು ಶಿಕ್ಷಣ ಇ
ಲಾಖೆ ಸಿದ್ಧವಿದೆ. ಪಾಲಕರು, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಪಾಲಕರು ಆತ್ಮಸ್ಥೈರ್ಯ ತುಂಬಬೇಕು. ಅವರಲ್ಲಿ ದೃಢವಿಶ್ವಾಸ ನೀಡಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಕ್ತ ಪ್ರತಿಭೆಯನ್ನು ಹೊರ ಹಾಕುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದ ಅವರು ಉತ್ತಮ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಹೈದ್ರಾಬಾದ್ ವಿಭಾಗದ ಯೂನಿಸೆಫ್ ಅಧ್ಯಕ್ಷರಾದ ಜಾರ್ಜ ಸೋನಿ, ಚಿಕ್ಕೋಡಿ ಜಿಲ್ಲೆಯ ಮೂಡಲಗಿಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಅಧಿಕಾರಿ ಬಿ.ವೈ.ದಾಸರ್, ಯೂನಿಸೆಫ್ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಹರೀಶ ಜೋಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ವೆಂಕಟೇಶ, ಬಿ.ಹೆಚ್.ಗೋನಾಳ ಸೇರಿದಂತೆ ಜಿಲ್ಲೆಯ ಮುಖ್ಯಗುರುಗಳು, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು.
0 comments:
Post a Comment