ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಲು, ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು. ಗುರಿ ಸಾಧಿಸುವ ದೃಢವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರು ಬುಧವಾರ ಮಧ್ಯಾಹ್ನ ಜಿಲ್ಲಾಡಳಿತ ಭವನದಲ್ಲಿರುವ ಅಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಯೂನಿಸೆಫ ಮಕ್ಕಳ ರಕ್ಷಣಾ ಯೋಜನೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಗಣನೀಯ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಉತ್ತಮ ಫಲಿತಾಂಶ ತರುವಲ್ಲಿ ಶ್ರಮಿಸಿದ ಶಾಲೆಯ ಶಿಕ್ಷಕರಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಕೊಪ್ಪಳ ಜಿಲ್ಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ೧೬ನೇ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದೆ. ಗಣನೀಯ ಸಾಧನೆ ಮಾಡಿ ಉತ್ತಮ ಫಲಿತಾಂಶಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳ ಕಾರ್ಯ ಮತ್ತು ಉತ್ತಮ ಫಲಿತಾಂಶ ಬರಲು ಶ್ರಮಿಸಿದ ಶಿಕ್ಷಕರ ಬಳಗಕ್ಕೆ ಅಭಿನಂದಿಸಿದ ಅವರು, ಶೈಕ್ಷಣಿಕ ಅಭಿವೃದ್ದಿಯಿಂದ ಮಾತ್ರ ಎಲ್ಲಾ ಕ್ಷೇತ್ರದಲ್ಲಿ ಏನಾದರೂ ಪ್ರಗತಿ ಸಾಧಿಸಲು ಸಾಧ್ಯವಾಗಿದ್ದು ಎಲ್ಲಾ ಕ್ಷೇತ್ರದ ಅಭಿವೃದ್ದಿ ಶಿಕ್ಷಣ ರಂಗದಲ್ಲಿ ಅಡಗಿದೆ. ಅದಕ್ಕಾಗಿ ನಾವು ಶೈಕ್ಷಣಿಕ ಅಭಿವೃದ್ದಿಗೆ ಹೆಚ್ಚು ಒತ್ತು ಕೊಡಬೇಕಿದೆ. ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ಶೈಕ್ಷಣಿಕ ರಂಗದಲ್ಲಿ ಅಭಿವೃದ್ದಿ ಸಾಧಿಸಲು ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿ ಜರುಗಲಿ. ಶೈಕ್ಷಣಿಕ ಅಭಿವೃದ್ದಿಯಿಂದ ಇತರ ಎಲ್ಲಾ ಕ್ಷೇತ್ರದ ಅಭಿವೃದ್ದಿಯಾಗಲಿ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಂಸದ ಶಿವರಾಮೇಗೌಡ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಹೆಚ್.ವೀರಣ್ಣ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಹರೀಶ ಜೋಗಿ, ಜಿ.ಪಂ.ಸದಸ್ಯ ಅಮರೇಶ ಕುಳಗಿ ಸೇರಿದಂತೆ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳು ಅವರ ಪೋಷಕರು, ಪಾಲಕರು, ಶಿಕ್ಷಕರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಉತ್ತಮ ಫಲಿತಾಂಶ ತರುವಲ್ಲಿ ಶ್ರಮಿಸಿದ ಶಿಕ್ಷಕರಿಗೆ ಸನ್ಮಾನಿಸಿ ಬಹುಮಾನ ವಿತರಿಸಲಾಯಿತು.
ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಅಡಿಟೋರಿಯಂ ಹಾಲ್‌ನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಗಣನೀಯ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬ್ಯಾಗ್ ವಿತರಿಸಲಾಯಿತು. ಭಾವಚಿತ್ರ ೦೨ ರಲ್ಲಿ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
0 comments:
Post a Comment